Advertisement
ಪ್ರಕರಣ ರದ್ದುಪಡಿಸುವಂತೆ ಕೋರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಇತರರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಮನಗರ ಗ್ರಾಮೀಣ ಠಾಣೆಯ ಪೊಲೀಸರು ವಿಚಾರಣ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಗೆ ಮಧ್ಯಾಂತರ ತಡೆ ನೀಡಿ ಆದೇಶಿಸಿತು.
ಅರ್ಜಿದಾರರ ಪರ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ ವಾದ ಮಂಡಿಸಿ, ಪಾದಯಾತ್ರೆ ನಡೆಸಲು ಸರಕಾರಿ ಪ್ರಾಧಿಕಾರಗಳೇ ಅನುಮತಿ ನೀಡಿರುವುದಕ್ಕೆ ಹಲವು ದಾಖಲೆಗಳು ಇವೆ. ಹೀಗಿದ್ದರೂ ಪಾದಯಾತ್ರೆ ನಡೆಸುವ ಮೂಲಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಡಿ ಅರ್ಜಿದಾರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವುದು ಸಂಪೂರ್ಣ ಅಕ್ರಮವಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
Related Articles
Advertisement