Advertisement
2 ಲ.ರೂ. ಪರಿಹಾರಅಲ್ಲದೆ, ಬಂಧಿತರಾಗುವ ಸಾಮಾನ್ಯ ಕೈದಿಗಳಿಗೆ ಕೈಕೋಳ ಹಾಕ ಬಾರದು. ಅಗತ್ಯವಿದ್ದರಷ್ಟೇ ಮಾತ್ರ ಕೈಕೋಳ ಹಾಕಲು ಅವಕಾಶವಿದೆ. ಆ ಪ್ರಕ್ರಿಯೆಯಲ್ಲಿ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಆದೇಶಿಸಿರುವ ನ್ಯಾಯಾಲಯ, ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧಿತ ವ್ಯಕ್ತಿಗೆ ಕಾನೂನು ಬಾಹಿರವಾಗಿ ಕೈಕೋಳ ಹಾಕಿದ್ದಕ್ಕಾಗಿ ಆತನಿಗೆ 2 ಲಕ್ಷ ರೂ. ಪರಿಹಾರ ನೀಡುವಂತೆ ಸರಕಾರಕ್ಕೆ ನಿರ್ದೇಶನ ನೀಡಿದೆ.
ಬೆಂಗಳೂರು: ಭ್ರಷ್ಟಾ ಚಾರ ನಿಗ್ರಹಕ್ಕೆಂದು ರಚಿಸಲಾದ ಎಸಿಬಿ ಇಂದು ಅತಿದೊಡ್ಡ ಭ್ರಷ್ಟರ ಕೂಪವಾಗಿದೆ; ಭ್ರಷ್ಟಾಚಾರವೇ ಅದರ ಧಂದೆಯಾಗಿದೆ ಎಂದು ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಲಂಚ ಪ್ರಕರಣದ ಆರೋಪಿ ಯಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಉಪ ತಹಶೀಲ್ದಾರ್ ಪಿ.ಎಸ್. ಮಹೇಶ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಎಸಿಬಿಯನ್ನು ತರಾಟೆಗೆ ತೆಗೆದುಕೊಂಡಿತು.
Related Articles
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಪ್ರಾಣಿಗಳ ವಧೆ ಹಾಗೂ ಸಾಗಣೆ ತಡೆಯಲು ಕೈಗೊಂಡ ಕ್ರಮಗಳ ವರದಿ ಸಲ್ಲಿಸುವಂತೆ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
Advertisement
ರಾಜ್ಯದಲ್ಲಿ ಕಸಾಯಿಖಾನೆಗಳ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಲು ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ “ಗೋ ಗ್ಯಾನ್ ಫೌಂಡೇಷನ್’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.