ಬೆಂಗಳೂರು: “ಒಬ್ಬ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಆರೋಪಿಗಳು ಮತ್ತೊಬ್ಬರ ಜೀವ ಉಳಿಸುವ ಕಾರಣ ನೀಡಿ ಜಾಮೀನು ಕೋರಲು ಸಾಧ್ಯವಿಲ್ಲ’ ಎಂದು ಹೈಕೋರ್ಟ್ ಹೇಳಿದೆ.
ಕೊಲೆ ಪ್ರಕರಣದಲ್ಲಿ ಒಂದೂವರೆ ವರ್ಷದಿಂದ ನ್ಯಾಯಾಂಗ ಬಂಧನದಲ್ಲಿರುವ ಸಹೋದರರು ಆನಾರೋಗ್ಯ ಪೀಡಿತ ತಮ್ಮ ತಂದೆಯ ಜೀವ ಉಳಿಸಲು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಜೀವ ಎನ್ನುವುದು ಪ್ರತಿಯೊಬ್ಬರಿಗೂ ಮುಖ್ಯ. ಓರ್ವನನ್ನು ಬರ್ಬರವಾಗಿ ಕೊಂದವರು ತಮ್ಮ ಅನಾರೋಗ್ಯ ಪೀಡಿತ ತಂದೆಯ ಜೀವ ಉಳಿಸಲೆಂದು ಜಾಮೀನು ಕೋರಲು ಸಾಧ್ಯವಿಲ್ಲ ಎಂದು ಹೇಳಿದೆ.
ಎಲೆಕ್ಟ್ರಾನಿಕ್ ಸಿಟಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಬಂಧನ ಕ್ಕೊಳಗಾಗಿರುವ ಸಾದಿಕ್ ಖಾನ್ ಹಾಗೂ ಆದಿಲ್ ಖಾನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.