Advertisement
ಈ ವಿಚಾರವಾಗಿ ಬೆಂಗಳೂರು ಮೂಲದ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಶೆಟ್ಟಿ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಲೋಕ್ ಆರಾಧೆ ಹಾಗೂ ನ್ಯಾ| ಜೆ.ಎಂ. ಖಾಜಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ಅರ್ಜಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ , ಕಾರ್ಯದರ್ಶಿ ಜಯ್ ಶಾ, ಕೊಲ್ಕೊತ್ತಾ ನೈಟ್ ರೈಡರ್ಸ್ ತಂಡದ ಮಾಲಕ ಶಾರುಖ್ ಖಾನ್ ಸೇರಿದಂತೆ ಐಪಿಎಲ್ ತಂಡಗಳ ಎಲ್ಲ ಮಾಲಕರು, ಬಿಸಿಸಿಐ ಪದಾಧಿಕಾರಿಗಳನ್ನು ಪ್ರತಿವಾದಿ ಗಳನ್ನಾಗಿ ಮಾಡಲಾಗಿತ್ತು.