Advertisement

ಐಪಿಎಲ್‌ ಹರಾಜು: ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

01:20 AM Jul 07, 2022 | Team Udayavani |

ಬೆಂಗಳೂರು: ಐಪಿಎಲ್‌ ಕ್ರಿಕೆಟ್‌ ಪಂದ್ಯಾವಳಿಗೆ ಆಟಗಾರರನ್ನು ಹರಾಜು ಹಾಕುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಹೇಳಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

Advertisement

ಈ ವಿಚಾರವಾಗಿ ಬೆಂಗಳೂರು ಮೂಲದ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್‌ ಶೆಟ್ಟಿ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಲೋಕ್‌ ಆರಾಧೆ ಹಾಗೂ ನ್ಯಾ| ಜೆ.ಎಂ. ಖಾಜಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ಅಮಿತ್‌ ಶಾ ಪ್ರತಿವಾದಿ!
ಅರ್ಜಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ , ಕಾರ್ಯದರ್ಶಿ ಜಯ್‌ ಶಾ, ಕೊಲ್ಕೊತ್ತಾ ನೈಟ್‌ ರೈಡರ್ಸ್‌ ತಂಡದ ಮಾಲಕ ಶಾರುಖ್‌ ಖಾನ್‌ ಸೇರಿದಂತೆ ಐಪಿಎಲ್‌ ತಂಡಗಳ ಎಲ್ಲ ಮಾಲಕರು, ಬಿಸಿಸಿಐ ಪದಾಧಿಕಾರಿಗಳನ್ನು ಪ್ರತಿವಾದಿ ಗಳನ್ನಾಗಿ ಮಾಡಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next