Advertisement
ಮಾಹಿತಿ ತಂತ್ರಜ್ಞಾನ ಕಾಯ್ದೆ-2020ರಡಿ ಕೇಂದ್ರದ ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊರಡಿಸಿರುವ ಆದೇಶ ಪ್ರಶ್ನಿಸಿ ಟ್ವಿಟರ್ ಇನ್‌ಕಾರ್ಪೊರೇಟೆಡ್ ಸಲ್ಲಿಸಿರುವ ತಕರಾರು ಅರ್ಜಿಯು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ-2000ದ ಸೆಕ್ಷನ್ 69ಎ ಅಡಿಯಲ್ಲಿ 2021ರ ಫೆ.2ರಿಂದ ವಿವಿಧ ದಿನಾಂಕಗಳಲ್ಲಿ ಹಲವು ನೋಟಿಸ್ ನೀಡಿರುವ ಕೇಂದ್ರ ಸರಕಾರ 1,474 ಟ್ವಿಟರ್ ಖಾತೆಗಳು ಹಾಗೂ 175 ಟ್ವೀಟ್‌ಗಳನ್ನು ಸಂಪೂರ್ಣವಾಗಿ ನಿರ್ಬಂಧಿಸುವಂತೆ ಆದೇಶಿಸಿದೆ. ಇದು ಏಕಪಕ್ಷೀಯ ನಿರ್ಧಾರವಾಗಿದ್ದು, ಐಟಿ ಕಾಯ್ದೆಗೆ ವಿರುದ್ಧವಾಗಿದೆ ಎಂದು ಅರ್ಜಿದಾರರ ವಾದವಾಗಿತ್ತು.