Advertisement

ನಿರ್ಬಂಧ ಆದೇಶ ಪ್ರಶ್ನಿಸಿ ಟ್ವಿಟರ್‌ ಅರ್ಜಿ: ಕೇಂದ್ರಕ್ಕೆ “ಹೈ’ನೋಟಿಸ್‌

12:30 AM Jul 27, 2022 | Team Udayavani |

ಬೆಂಗಳೂರು: ಹಲವು ವ್ಯಕ್ತಿಗತ ಟ್ವಿಟರ್‌ ಖಾತೆಗಳನ್ನು ನಿರ್ಬಂಧಿಸುವಂತೆ ಹೊರಡಿಸಲಾಗಿರುವ ಆದೇಶವನ್ನು ಆಕ್ಷೇಪಿಸಿ ಟ್ವಿಟರ್‌ ಸಂಸ್ಥೆ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌ ಕೇಂದ್ರ ಸರಕಾರಕ್ಕೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಆ.25ಕ್ಕೆ ಮುಂದೂಡಿತು.

Advertisement

ಮಾಹಿತಿ ತಂತ್ರಜ್ಞಾನ ಕಾಯ್ದೆ-2020ರಡಿ ಕೇಂದ್ರದ ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊರಡಿಸಿರುವ ಆದೇಶ ಪ್ರಶ್ನಿಸಿ ಟ್ವಿಟರ್‌ ಇನ್‌ಕಾರ್ಪೊರೇಟೆಡ್‌ ಸಲ್ಲಿಸಿರುವ ತಕರಾರು ಅರ್ಜಿಯು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ಟ್ವಿಟರ್‌ ಸಂಸ್ಥೆ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಮುಕುಲ್‌ ರೋಹಟಗಿ ಮತ್ತು ಅಶೋಕ್‌ ಹಾರನಹಳ್ಳಿ, ಟ್ವಿಟರ್‌ನಲ್ಲಿ ವ್ಯಕ್ತಿಗತವಾಗಿ ಹೊಂದಿರುವ ಸಾವಿರಾರು ಖಾತೆಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರಕಾರ ಆದೇಶ ಮಾಡಿದೆ. ಕಾನೂನಿನ ಅನ್ವಯ ಸರಕಾರದ ಆದೇಶವನ್ನು ನಾವು ಪಾಲಿಸಬೇಕಿದೆ. ಆದರೆ, ಕೇಂದ್ರದ ಈ ಆದೇಶದಿಂದ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಲಿದೆ ಎಂದು ವಿವರಿಸಿದರು.

ಪ್ರಕರಣವೇನು?
ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ-2000ದ ಸೆಕ್ಷನ್‌ 69ಎ ಅಡಿಯಲ್ಲಿ 2021ರ ಫೆ.2ರಿಂದ ವಿವಿಧ ದಿನಾಂಕಗಳಲ್ಲಿ ಹಲವು ನೋಟಿಸ್‌ ನೀಡಿರುವ ಕೇಂದ್ರ ಸರಕಾರ 1,474 ಟ್ವಿಟರ್‌ ಖಾತೆಗಳು ಹಾಗೂ 175 ಟ್ವೀಟ್‌ಗಳನ್ನು ಸಂಪೂರ್ಣವಾಗಿ ನಿರ್ಬಂಧಿಸುವಂತೆ ಆದೇಶಿಸಿದೆ. ಇದು ಏಕಪಕ್ಷೀಯ ನಿರ್ಧಾರವಾಗಿದ್ದು, ಐಟಿ ಕಾಯ್ದೆಗೆ ವಿರುದ್ಧವಾಗಿದೆ ಎಂದು ಅರ್ಜಿದಾರರ ವಾದವಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next