Advertisement

ಇಂದು ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳಿಂದ ಹೈಕೋರ್ಟ್‌ನಲ್ಲಿ ದಾವೆ

07:52 PM Aug 03, 2022 | Team Udayavani |

ಬೆಂಗಳೂರು: ಸಿಇಟಿ ಫ‌ಲಿತಾಂಶದ ವಿಚಾರವಾಗಿ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಣಯದ ವಿರುದ್ಧ 2021ನೇ ಸಾಲಿನ ಪುನರಾವರ್ತಿತ ವಿದ್ಯಾರ್ಥಿಗಳು ಗುರುವಾರ ಹೈಕೋರ್ಟ್‌ನಲ್ಲಿ ದಾವೆ ಹೂಡಲು ನಿರ್ಧರಿಸಿದ್ದಾರೆ.

Advertisement

ಉನ್ನತ ಶಿಕ್ಷಣ ಸಚಿವ ಡಾ .ಸಿ.ಎನ್‌. ಅಶ್ವತ್ಥ ನಾರಾಯಣ ಅವರು ಮಂಗಳವಾರ ಸುದ್ದಿಗೋಷ್ಠಿ ನಡೆಸಿ, 2021ನೇ ಸಾಲಿನ ಸಿಇಟಿ ಪುನರಾವರ್ತಿತ 24 ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸುವುದು ಸಾಧ್ಯವಿಲ್ಲ. ಈ ವಿಷಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದು ಸ್ಪಷ್ಟಪಡಿಸಿದ್ದರು.

ಸಿಇಟಿ-2022ರ ಫ‌ಲಿತಾಂಶವು ಜು.30ರಂದು ಪ್ರಕಟವಾಗಿದ್ದು, ಅಂದಿನಿಂದಲೂ ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆಯೇ ಉನ್ನತ ಶಿಕ್ಷಣ ಸಚಿವರು ಪತ್ರಿಕಾಗೋಷ್ಠಿ ನಡೆಸಿ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದರಿಂದ ಮತ್ತಷ್ಟು ಆಕ್ರೋಶಗೊಂಡಿದ್ದಾರೆ. ಮಾತ್ರವಲ್ಲ, ಫ‌ಲಿತಾಂಶ ಪ್ರಕಟಿಸಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗಲಾಗುತ್ತಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next