ಬೆಂಗಳೂರು: “ಕಾಂತಾರ’ ಸಿನಿಮಾದಲ್ಲಿ ಹೇಳಿರುವಂತೆ “ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದಲ್ಲಿ ನಟ ಚೇತನ್ ವಿರುದ್ದ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.
ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ನಟ ಚೇತನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಈ ಹಂತದಲ್ಲಿ ಕೋರ್ಟ್ ಹಸ್ತಕ್ಷೇಪ ಮಾಡಬಾರದೆಂದು ಸುಪ್ರೀಂಕೋರ್ಟ್ ನೀಡಿರುವ ಹಲವು ತೀರ್ಪುಗಳನ್ನು ಆಧರಿಸಿ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿ ಅರ್ಜಿಯನ್ನು ತಿರಸ್ಕರಿಸಿತು.
ಹೀಗಾಗಿ ನಟ ಚೇತನ್ ವಿಚಾರಣೆಯನ್ನು ಎದುರಿಸಲೇಬೇಕಾಗಿದೆ.
Related Articles