Advertisement

ಜಾತಿ ನಿಂದನೆ ಆರೋಪ: ಸಭಾಪತಿ ವಿರುದ್ಧದ ವಿಚಾರಣೆಗೆ ತಡೆ

11:45 PM Jan 31, 2022 | Team Udayavani |

ಬೆಂಗಳೂರು: ಜಾತಿ ನಿಂದನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ಮಧ್ಯಾಂತರ ತಡೆಯಾಜ್ಞೆ ನೀಡಿದೆ.

Advertisement

ಈ ವಿಚಾರವಾಗಿ ಬ ಹೊರಟ್ಟಿಯವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಸ್ವಲ್ಪ ಹೊತ್ತು ವಾದ – ಪ್ರತಿವಾದ ಆಲಿಸಿದ ನ್ಯಾಯಪೀಠ, ಹೊರಟ್ಟಿಯವರ ವಿರುದ್ಧದ ವಿಚಾರಣೆಗೆ ಸೀಮಿತವಾಗಿ ಮಧ್ಯಾಂತರ ತಡೆ ನೀಡಿ, ಉಳಿದವರ ವಿರುದ್ಧ ಪೊಲೀಸರು ಮುಂದಿನ ಪ್ರಕ್ರಿಯೆ ಕೈಗೊಳ್ಳಬಹುದು ಎಂದು ಆದೇಶಿಸಿದೆ.

ಅಲ್ಲದೆ, ಅರ್ಜಿಗೆ ಸಂಬಂಧಿಸಿ ದೂರುದಾರರಿಗೆ ತುರ್ತು ನೋಟಿಸ್‌ ಜಾರಿಗೊಳಿಸಿದ ನ್ಯಾಯಪೀಠ, ರಾಜ್ಯ ಸರಕಾರ ಸಹಿತ ಉಳಿದ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಮುಂದೂಡಿತು.

ಇದನ್ನೂ ಓದಿ:ರಾಜ್ಯಪಾಲರ ಟ್ವಿಟರ್‌ ಖಾತೆ ಬ್ಲಾಕ್‌ ಮಾಡಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

Advertisement

ಘಟನೆ ನಡೆದ ಸ್ಥಳದಲ್ಲಿ ಅರ್ಜಿದಾರರು ಇರಲಿಲ್ಲ. ಎಫ್ಐಆರ್‌ನಲ್ಲೂ ಅವರ ವಿರುದ್ಧ ಗಂಭೀರ ವಿಚಾರಗಳು ಇಲ್ಲ. ಮುಖ್ಯವಾಗಿ, ಅರ್ಜಿದಾರರು ವಿಧಾನ ಪರಿಷತ್‌ ಸಭಾಪತಿಯಾಗಿದ್ದು, ಸಾಂವಿಧಾನಿಕ ಹುದ್ದೆಯಲ್ಲಿದ್ದಾರೆ. ಹೀಗಿರುವಾಗ ನ್ಯಾಯಾಲಯ ಸೂಕ್ಷ್ಮವಾಗಿ ಪರಿಗಣಿಸಬೇಕಾಗುತ್ತದೆ. ಮೇಲ್ನೋಟಕ್ಕೆ ಈ ಹಂತದಲ್ಲಿ ತಡೆ ನೀಡಬಹುದು ಎಂದು ನ್ಯಾಯಾಲಯಕ್ಕೆ ಮನವರಿಕೆಯಾಗಿದೆ ಎಂದು ನ್ಯಾಯಪೀಠ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next