ಬೆಂಗಳೂರು: ‘ರೌಡಿ ಪರೇಡ್ ಹೆಸರಲ್ಲಿ ಸಿಸಿಬಿ ಕಚೇರಿಗೆ ಕರೆಸಿ ಮೂರು ದಿನಗಳ ಕಾಲ ಅಕ್ರಮ ಬಂಧನದಲ್ಲಿ ರಿಸಿಕೊಂಡು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಲಾಗಿದೆ,’ ಎಂದು ಆರೋಪಿಸಿ ರೌಡಿ ಶೀಟರ್ ಸುನೀಲ್ ಕುಮಾರ್ ಅಲಿಯಾಸ್ ಸೈಲೆಂಟ್ ಸುನೀಲ್ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್‌ಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
‘ರೌಡಿ ಪರೇಡ್’ ಹೆಸರಲ್ಲಿ ನನ್ನ ಮೇಲೆ ನಡೆದ ದೌರ್ಜ ನ್ಯದ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದರಿಂದ ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಆಲೋಕ್ ಅವರು ನನ್ನ ಮೇಲೆ ಮತ್ತಷ್ಟು ದೌರ್ಜನ್ಯ ನಡೆಸಬ ಹುದು. ಅಲ್ಲದೇ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಬಹುದು. ಈಗಾಗಲೇ ತುಮಕೂರಿನ ಮಾಜಿ ಮೇಯರ್ ಕೊಲೆ ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸಿಸಿಬಿಯವರು ಬೆದರಿಕೆ ಹಾಕಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಪ್ರಕರಣವೇನು?: ಏಪ್ರಿಲ್ 10ರಂದು ಸುನೀಲ್ ಕುಮಾರ್ ಪತ್ನಿಯ ಮೊಬೈಲ್ಗೆ ಕರೆ ಮಾಡಿದ್ದ ಸಿಸಿಬಿ ಅಧಿಕಾರಿಗಳು, ಮೇ 12ರಂದು ನಡೆಯುವ ರೌಡಿ ಪರೇಡ್‌ಗೆ ಹಾಜರಾಗಬೇಕು ಎಂದು ಸೂಚಿಸಿದ್ದರು. ಅದರಂತೆ ಏ.12ರಂದು ಸುನೀಲ್ ಸಿಸಿಬಿ ಕಚೇರಿಗೆ ಹೋಗಿದ್ದ. ರೌಡಿ ಪರೇಡ್ ವೇಳೆ ಆಲೋಕ್ ಕುಮಾರ್ ಸುನೀಲ್ ಬಳಿ ಬಂದು ಏರು ಧ್ವನಿಯಲ್ಲಿ ಮಾತನಾಡಿದ್ದರು. ರಾತ್ರಿ 10.30ರ ತನಕ ಸಿಸಿಬಿ ಕಚೇರಿಯಲ್ಲಿ ಕೂರಿಸಿಕೊಂಡು ಮರು ದಿನ (ಏ.13) ಬರುವಂತೆ ಸೂಚಿಸಿದರು.
ಅದರಂತೆ ಏ.13, 14 ಮತ್ತು 15ರಂದು ಸುನೀಲ್ ಕುಮಾರ್ ಸತತವಾಗಿ ಸಿಸಿಬಿ ಕಚೇರಿಗೆ ಹೋದ. ಆದರೆ, ಅಲೋಕ್ ಭೇಟಿ ಆಗಿಲ್ಲ. ಕೊನೇ ದಿನ ಇಬ್ಬರು ಸಿಸಿಬಿ ಅಧಿಕಾರಿಗಳು ಸುನೀಲ್ ಕುಮಾರ್‌ಗೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ನೀನು ಜೈಲಿಗೆ ಹೋದರೆ, ವಾಪಸ್ ಬರುವುದಿಲ್ಲ ಎಂದಿದ್ದರು ಎನ್ನಲಾಗಿದೆ. ಇದರ ವಿರುದ್ಧ ಸುನೀಲ್ ಹೈಕೋರ್ಟ್ ಮೆಟ್ಟಿಲೇರಿದ್ದಾನೆ.
Advertisement
ಈ ಕುರಿತಂತೆ ಸುನೀಲ್ ಕುಮಾರ್ ಸಲ್ಲಿಸಿದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಗೃಹ ಇಲಾಖೆ ಹಾಗೂ ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಆಲೋಕ್ ಕುಮಾರ್ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಿತು. ಅಲ್ಲದೇ ಅರ್ಜಿದಾರರಿಗೆ ಅನಗತ್ಯ ಕಿರುಕುಳ ನೀಡದಂತೆ ಮಧ್ಯಂತರ ಆದೇಶ ನೀಡಿ ವಿಚಾರಣೆಯನ್ನು ಮುಂದೂಡಿತು.
Related Articles
Advertisement