Advertisement
ಈ ವಿಚಾರವಾಗಿ ನ್ಯಾಷನಲ್ ಫೆಡರೇಷನ್ ಆಫ್ ದಿ ಬ್ಲೈಂಡ್ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾ| ಜೆ.ಎಂ. ಖಾಜಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
Related Articles
Advertisement
ಅಂಗವಿಕಲ ಸರ್ಕಾರಿ ನೌಕರರ ನಿಯೋಜನೆ ಮತ್ತು ವರ್ಗಾವಣೆಗೆ ಸಮಗ್ರ ನೀತಿ ರೂಪಿಸುವಂತೆ 2020ರ ಆ. 4ರಂದು ಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದೆ. ಅದಾಗ್ಯೂ ಈವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ದೂರಿದರು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ ಎರಡು ವಾರಗಳಲ್ಲಿ ನಿಲುವು ತಿಳಿಸುವಂತೆ ಸರಕಾರಕ್ಕೆ ನ್ಯಾಯಪೀಠ ನಿರ್ದೇಶನ ನೀಡಿತು. ಜತೆಗೆ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.