ಬೆಂಗಳೂರು: ರಾಜ್ಯದಲ್ಲಿ ರುವ ಬೇಚರಾಕ್’ (ಜನವಸತಿ ಇಲ್ಲದ) ಗ್ರಾಮಗಳ ಪಟ್ಟಿಯನ್ನು ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ರಾಜ್ಯದಲ್ಲಿ ಶ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಲು ಸರಕಾರಕ್ಕೆ ನಿರ್ದೇ ಶಿಸಿ ಹೈಕೋರ್ಟ್ ಹೊರಡಿಸಿದ ಆದೇಶ ಜಾರಿಯಾ ಗಿಲ್ಲ ಎಂದು ಆಕ್ಷೇಪಿಸಿ ಬೆಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ ಸಲ್ಲಿಸಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯು ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ಶವ ಸಂಸ್ಕಾರಕ್ಕೆ ಜಾಗ ಇಲ್ಲದ ಗ್ರಾಮಗಳಿಗೆ ಶ್ಮಶಾನ ಭೂಮಿ ಒದಗಿಸಿರುವ ಸರಕಾರದ ವರದಿಯನ್ನು ಪರಿಶೀಲಿಸಿ ವಸ್ತುಸ್ಥಿತಿಯನ್ನು ತಿಳಿಸುವಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಈ ಹಿಂದೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಸರಕಾರದ ಅಂಕಿ-ಅಂಶಗಳಿಗೂ ಮತ್ತು ಪ್ರಾಧಿಕಾರ ಸಂಗ್ರಹಿಸಿದ ಮಾಹಿತಿಗೂ ವ್ಯತ್ಯಾಸವಿದೆ. ರಾಜ್ಯದಲ್ಲಿ ಒಟ್ಟು 29,616 ಗ್ರಾಮಗಳಿದ್ದು, ಅದರಲ್ಲಿ 1,394 ಬೇಚರಾಕ್ ಗ್ರಾಮಗಳಿವೆ ಎಂದು ಸರಕಾರ ಹೇಳಿದೆ.
ಸರಕಾರದ ವರದಿಯಲ್ಲಿ ಗ್ರಾಮಗಳ ಸಂಖ್ಯೆ ಹೇಳ ಲಾಗಿದೆಯೇ ಹೊರತು ಬೇಚರಾಕ್ ಗ್ರಾಮ ಗಳ ಪಟ್ಟಿ ಇಲ್ಲ ಎಂದು ಪ್ರಾಧಿಕಾರ ನ್ಯಾಯಾಲಯದ ಗಮನಕ್ಕೆ ತಂದಿತ್ತು.
ಸರಕಾರದ ಪರ ವಕೀಲರು ಬೇಚ ರಾಕ್ ಗ್ರಾಮಗಳ ಪಟ್ಟಿ ಸಲ್ಲಿಸಲು ಕಾಲಾವಕಾಶ ಕೋರಿದರು. ಪರಿಗಣಿಸಿದ ನ್ಯಾಯ ಪೀಠ ವಿಚಾರಣೆಯನ್ನು ಒಂದು ವಾರ ಮುಂದೂಡಿತು.