Advertisement

ಮಕ್ಕಳ ಅಪೌಷ್ಟಿಕತೆ: ವಿಚಾರಣೆ ಮುಂದಕ್ಕೆ

09:37 PM Jan 27, 2022 | Team Udayavani |

ಬೆಂಗಳೂರು: ರಾಜ್ಯಕ್ಕೆ ಹೆಚ್ಚುವರಿಯಾಗಿ 4,244 ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮೂರು ವಾರಗಳಲ್ಲಿ ಮಾಹಿತಿ ನೀಡುವಂತೆ ಕೇಂದ್ರ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Advertisement

ರಾಜ್ಯದಲ್ಲಿ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗೆ ಸಂಬಂಧಿಸಿ 2011ರಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ರಿತುರಾಜ್‌ ಅವಸ್ಥಿ ಹಾಗೂ ನ್ಯಾ| ಸೂರಜ್‌ ಗೋವಿಂದರಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.

ಈ ವೇಳೆ ಕೇಂದ್ರ ಸರಕಾರದ ಪರ ವಕೀಲರು ವಾದ ಮಂಡಿಸಿ, ಕರ್ನಾಟಕಕ್ಕೆ ಹೆಚ್ಚುವರಿ ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡುವ ಬಗ್ಗೆ ಕೇಂದ್ರ ಸರಕಾರದ ಸಂಬಂಧಪಟ್ಟ ಸಚಿವಾಲಯದಿಂದ ಮಾಹಿತಿ ಪಡೆದುಕೊಳ್ಳಬೇಕಾಗಿದೆ. ಹಾಗಾಗಿ, ಕಾಲಾವಕಾಶ ಬೇಕು ಎಂದು ಕೋರಿದ್ದು, ಹೈಕೋರ್ಟ್‌ ಮೂರು ವಾರ ಕಾಲಾವಕಾಶ ನೀಡಿತು.

ಅಲ್ಲದೆ ಅಪೌಷ್ಟಿಕತೆ ನಿವಾರಣೆಗೆ ಸಂಬಂಧಿಸಿದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎ.ಎನ್‌. ವೇಣುಗೋಪಾಲ ಗೌಡ  ನೇತೃತ್ವದ ಉನ್ನತ ಮಟ್ಟದ ಸಮಿತಿಯ ಮಧ್ಯಾಂತರ ಶಿಫಾರಸುಗಳನ್ನು ಜಾರಿಗೆ ತಂದಿರುವ ಬಗ್ಗೆ ಮೂರು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಫೆ.18ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next