Advertisement
ಇದರಿಂದ ಗಲ್ಲು ಶಿಕ್ಷೆ ವಿಧಿಸಲ್ಪಟ್ಟು ಕಳೆದ ಮೂರು ದಶಕಗಳಿಂದ ಸೆರೆವಾಸ ಅನುಭವಿಸುತ್ತಿರುವ ಸಾಯಿಬಣ್ಣ ಈಗ ಜೀವವಿರುವರೆಗೂ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ. ಗಲ್ಲು ಶಿಕ್ಷೆ ಪ್ರಶ್ನಿಸಿ ಸಾಯಿಬಣ್ಣ ಅಲಿಯಾಸ್ ನಿಂಗಪ್ಪ ನಾಟಿಕರ್ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾ. ಜಿ.ನರೇಂದರ್ ಮತ್ತು ನ್ಯಾ.ಸಿ.ಎಂ.ಪೂಣಚ್ಚ ಅವರಿದ್ದ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ತೀರ್ಪು ನೀಡಿದೆ. ಇಡೀ ಪ್ರಕರಣದ ವಿವರಗಳು ಮತ್ತು ಸಂದರ್ಭಗಳನ್ನು ಪರಿಗಣಿಸಿದರೆ ಅರ್ಜಿದಾರನು ಈಗಾಗಲೇ 30ವರ್ಷಕ್ಕೂ ಅಧಿಕ ಸೆರೆವಾಸ ಅನುಭವಿಸಿದ್ದಾನೆ. ನಮ್ಮ ಪ್ರಕಾರ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಲು ಸ್ವಾತಂತ್ರÂ ನೀಡುವುದರ ಜತೆಗೆ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿದರೆ ನ್ಯಾಯ ಸಂದಾಯವಾಗುತ್ತದೆ ಎಂದು ನ್ಯಾಯಪೀಠ ಹೇಳಿದೆ.
Related Articles
Advertisement
ಪ್ರಕರಣದಲ್ಲಿ ಹೈಕೋರ್ಟ್‌ಗೆ ನೆರವು ನೀಡಲು ಅಮಿಕಸ್ ಕ್ಯೂರಿ ಆಗಿ ನೇಮಕಗೊಂಡಿದ್ದ ಹಿರಿಯ ನ್ಯಾಯವಾದಿ ವಿಕ್ರಂ ಹುಯಿಲಗೋಳ. ಏಕಾಂಗಿ ಸೆರೆವಾಸ ವಿಧಿಸಿರುವುದು ನಿಜವಾಗಿದೆ. ಹಾಗಾಗಿ ಗಲ್ಲು ಶಿಕ್ಷೆಯನ್ನು ಕಡಿತಗೊಳಿಸುವಂತೆ ಕೋರಲು ಆತನಿಗೆ ಹಕ್ಕಿದೆ. ಕ್ಷಮಾದಾನ ಅರ್ಜಿ ಪರಿಗಣಿಸು ವುದು ಮತ್ತು ವಿಲೇವಾರಿಯಲ್ಲಿ ವಿಳಂಬವಾಗಿರುವುದನ್ನು ಗಾಯವೆಂದು ಪರಿಗಣಿಸಬಹುದಾಗಿದೆ ಎಂದಿದ್ದರು. ಆದರೆ, ಶಿಕ್ಷೆ ಕಡಿತದ ಅರ್ಜಿಯನ್ನು ವಜಾಗೊಳಿಸಬೇಕೆಂದು ಪ್ರಾಸಿಕ್ಯೂಷನ್ ಕೋರಿತ್ತು.
ಅನೈತಿಕ ಸಂಬಂಧ: ಕೊಲೆ:
ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿ ಸಾಯಿಬಣ್ಣ 1988ರಲ್ಲಿ ಪತ್ನಿ ಮಾಲಕವ್ವಳನ್ನು ಕೊಲೆ ಮಾಡಿ ತಾನೇ ಬಂದು ಪೊಲೀಸರಿಗೆ ಶರಣಾಗಿದ್ದನು. ಆನಂತರ ಜೈಲಿನಲ್ಲಿರುವಾಗ ಸಹಕೈದಿ ದತ್ತು ಎಂಬಾತನೊಂದಿಗೆ ಆತನ ಸ್ನೇಹ ಬೆಳೆಯಿತು. ಜಾಮೀನು ಪಡೆದು ಸಹ ಕೈದಿ ದತ್ತುವಿನ ಪುತ್ರಿ ನಾಗಮ್ಮಗಳನ್ನು ವಿವಾಹವಾಗಿದ್ದನು. 2ನೇ ಪತ್ನಿ ನಾಗಮ್ಮಳಿಗೆ ವಿಜಯಲಕ್ಷಿ$¾ ಎಂಬ ಮಗು ಜನಿಸಿತ್ತು. ಈ ಮಧ್ಯೆ ಮೊದಲ ಪತ್ನಿ ಕೊಲೆ ಕೇಸಿನಲ್ಲಿ ಸಾಯಿಬಣ್ಣನಿಗೆ ಜೀವಾವಧಿ ಶಿಕ್ಷೆ ಆಗಿತ್ತು. 1994ರಲ್ಲಿ ಪೆರೋಲ್ ಪಡೆದು ಹೊರಬಂದಿದ್ದ ಸಾಯಿಬಣ್ಣ 2ನೇ ಪತ್ನಿ ಹಾಗೂ ಮಗುವನ್ನು ಕೊಲೆ ಮಾಡಿ ಮತ್ತೆ ಜೈಲು ಸೇರಿದ್ದ. ಕಲಬುರಗಿ ಸೆಷನ್ಸ್ ಕೋರ್ಟ್, ಸಾಯಿಬಣ್ಣಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿತ್ತು. ನಂತರ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಕೂಡ ಆ ಮರಣದಂಡನೆ ಶಿಕ್ಷೆಯನ್ನು ಎತ್ತಿಹಿಡಿದಿತ್ತು. ಆದರೆ ಕ್ಷಮಾದಾನ ಅರ್ಜಿ ವಿಲೇವಾರಿಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಗಲ್ಲು ಶಿಕ್ಷೆ ವಿನಾಯ್ತಿಗೆ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.