ಮೈಸೂರು: ಚುನಾವಣೆ ವೇಳೆ ಸೂಕ್ತ ಆದಾಯ ಪ್ರಮಾಣ ಪತ್ರ ಸಲ್ಲಿಸದ ಹಿನ್ನೆಲೆ ಮೈಸೂರು ಮಹಾನಗರ ಪಾಲಿಕೆಯ 36 ನೇ ವಾರ್ಡ್ ಸದಸ್ಯೆ ಹಾಗೂ ಹಾಲಿ ಮೇಯರ್ ರುಕ್ಮಿಣಿ ಮಾದೇಗೌಡ ಅವರ ಪಾಲಿಕೆ ಸದಸ್ಯತ್ವ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಪಾಲಿಕೆ ಸದಸ್ಯತ್ವ ರದ್ದಾಗಿರುವುದರಿಂದ ಮೇಯರ್ ಸ್ಥಾನಕ್ಕೂ ಕಂಟಕ ಎದುರಾಗಿದ್ದು, ಹೈ ಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕುವವರೆಗೂ ಮೇಯರ್ ಗೆ ಅಧಿಕಾರ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆಹೋಗಲು ರುಕ್ಮಿಣಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಪರಾಜಿತ ಅಭ್ಯರ್ಥಿ ರಜನಿ ಅಣ್ಣಯ್ಯಗೆ ಗೆಲುವು ಎಂದು ಕನ್ಸಿಡರ್ ಮಾಡಲು ಸಾಧ್ಯವಿಲ್ಲ, ನೇರವಾಗಿ ಮತ್ತೆ ಚುನಾವಣೆ ಹೋಗಬೇಕೆಂದು ಹೈಕೋರ್ಟ್ ತೀರ್ಪು ನೀಡಿದೆ.
ಇದನ್ನೂ ಓದಿ :ದರೋಡೆಕೋರನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
ಒಂದು ತಿಂಗಳ ಒಳಗಾಗಿ ಸುಪ್ರಿಂಕೋರ್ಟ್‌ನಲ್ಲಿ ಮೇಲ್ಮನವಿ ಸ್ವೀಕಾರ ಆದರೆ ರುಕ್ಮಿಣಿಗೆ ಮೇಯರ್ ಸ್ಥಾನ ಸೇಫ್ ಆಗಲಿದೆ ಎಂದು ಹೇಳಲಾಗಿದೆ.