Advertisement
ಬೀಗ ತೆರವುಗೊಳಿಸುವಂತೆ ಬಿಬಿಎಂಪಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಮಂತ್ರಿ ಮಾಲ್ ಆಡಳಿತ ಮಂಡಳಿಯ ಅಭಿಷೇಕ್ ಪ್ರೊಪ್‌ಬಿಲ್ಡ್ ಪ್ರೈವೆಟ್ ಲಿಮಿಟೆಡ್ ಹಾಗೂ ಹಮಾರಾ ಶೆಲ್ಟರ್ ಪ್ರೈವೆಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಈ ಆದೇಶ ನೀಡಿತು.
Related Articles
Advertisement
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಎಸ್. ಶ್ಯಾಮ್‌ಸುಂದರ್ ವಾದ ಮಂಡಿಸಿ, ಬಿಬಿಎಂಪಿ ಬೀಗ ಹಾಕುವ ಬಗ್ಗೆ ನಮಗೆ ಮುಂಚಿತವಾಗಿಯೇ ನೋಟಿಸ್ ನೀಡಿಲ್ಲ. ಕೋವಿಡ್ ಕಾರಣದಿಂದ ಸಕಾಲದಲ್ಲಿ ತೆರಿಗೆ ಪಾವತಿಸಲು ಸಾಧ್ಯವಾಗಿಲ್ಲ. ಮಾಲ್ ಬೀಗ ಹಾಕಿರುವುದರಿಂದ ನೌಕರರು ಸಂಬಳವಿಲ್ಲದೆ ಪರದಾಡುವಂತಾಗಿದೆ. ಒಳಗಿರುವ ಒಂದೂವರೆ ಕೋಟಿ ಮೌಲ್ಯದ ವಸ್ತುಗಳು ಎರಡು ದಿನಗಳÇÉೇ ನಾಶವಾಗುವ ಆತಂಕವಿದೆ. ಸದ್ಯ ಒಂದು ಕೋಟಿ ರೂಪಾಯಿ ಪಾವತಿಸುತ್ತೇವೆ. ಉಳಿದ ತೆರಿಗೆಯನ್ನು ಹಂತಹಂತವಾಗಿ ಚುಕ್ತಾ ಮಾಡುತ್ತೇವೆ. ಆದ್ದರಿಂದ, ಇವತ್ತೇ ಬೀಗ ತೆರೆಯುವಂತೆ ಬಿಬಿಎಂಪಿಗೆ ನಿರ್ದೇಶಿಸಬೇಕು’ ಎಂದು ಕೋರಿದರು.
ಇದಕ್ಕೆ ಆಕ್ಷೇಪಿಸಿದ ಬಿಬಿಎಂಪಿ ಪರ ವಕೀಲರು, ಅರ್ಜಿದಾರರು ಕೋವಿಡ್ ನೆಪ ಹೇಳುತ್ತಿರುವುದು ಸರಿಯಲ್ಲ. ನಾಲ್ಕು ವರ್ಷಗಳಿಂದ ಬಾಕಿಯನ್ನು ಉಳಿಸಿಕೊಂಡು ಬರುತ್ತಿರುವ ಮಂತ್ರಿ ಮಾಲ್ 33 ಕೋಟಿಗೂ ಅಧಿಕ ತೆರಿಗೆ ಬಾಕಿ ಉಳಿಸಿಕೊಂಡಿದೆ. ಬಾಕಿ ಹಣವನ್ನು ಇದೇ 5ರಂದು ಸಂಪೂರ್ಣ ಬಾಕಿ ಚುಕ್ತಾ ಮಾಡುವುದಾಗಿ ಈ ವರ್ಷದ ಆರಂಭದಲ್ಲಿ ಮುಚ್ಚಳಿಕೆ ಬರೆದುಕೊಟ್ಟಿತ್ತು. ಆದರೆ, ಆಡಳಿತ ಮಂಡಳಿ ಹೇಳಿದ ಮಾತಿನಂತೆ ನಡೆದುಕೊಳ್ಳುತ್ತಿಲ್ಲ’ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ನ್ಯಾಯಪೀಠ ವಿಚಾರಣೆಯನ್ನು ಡಿ.13ಕ್ಕೆ ಮುಂದೂಡಿತು.