Advertisement
ಈ ಕುರಿತು ಸಿನಿಮಾ ನಿರ್ದೇಶಕ ದಯಾಳ್ ಪದ್ಮನಾಭನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಚ್.ಟಿ. ನರೇಂದ್ರಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ, ಅವು ಸಾಬೀತಾದರೆ ಕಾನೂನು ರೀತಿ ಕ್ರಮ ಜರುಗಿಸುವಂತೆ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಚಲನಚಿತ್ರೋತ್ಸವ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿ ಅರ್ಜಿಯನ್ನು ವಿಲೇವಾರಿ ಮಾಡಿತು.
66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ-2018ರ ಆಯ್ಕೆ ಸಮಿತಿ ಸದಸ್ಯರಾಗಿದ್ದ ಬಿ.ಎಸ್ ಲಿಂಗದೇವರು “ಅಕ್ಕ ಕಮ್ಯುನಿಕೇಷನ್ ಪ್ರೈವೇಟ್ ಲಿಮಿಟೆಡ್ ಕಂಪನಿ’ಯ ನಿರ್ದೇಶಕರೂ ಸಹ ಆಗಿದ್ದಾರೆ. ಮೇಲಾಗಿ ನಾತಿಚರಾಮಿ’ ಚಿತ್ರದ ಸಂಕಲನಕ್ಕೆ ‘ಅಕ್ಕ’ ಕಂಪನಿ ಸಹಾಯ ಮಾಡಿದೆ. ಈ ಮೂಲಕ ಲಿಂಗದೇವರು ನಾತಿಚರಾಮಿ’ ಚಿತ್ರದ ನಿರ್ಮಾಣದಲ್ಲಿ ನೇರ ಪಾತ್ರ ವಹಿಸಿರುವುದು ಸ್ಪಷ್ಟವಾಗಿದೆ. ಆದರೆ, ಆಯ್ಕೆ ಸಮಿತಿ ಮುಂದೆ ನೀಡಲಾಗಿದ್ದ ಘೋಷಣಾ ಪ್ರಮಾಣ ಪತ್ರದಲ್ಲಿ ಈ ಅಂಶವನ್ನು ಮರೆಮಾಚಲಾಗಿದೆ’ ಎಂದು ಅರ್ಜಿದಾರರು ಆರೋಪಿಸಿದ್ದರು.