Advertisement
ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ಎಡಿಜಿಪಿ ಅಮೃತ್ ಪೌಲ್ ಬಂಧನಾನಂತರದ ತನಿಖಾ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ ಸಂದರ್ಭದಲ್ಲಿ ನ್ಯಾ| ಎಚ್.ಪಿ. ಸಂದೇಶ್ ಈ ಅಭಿ ಪ್ರಾಯ ಪಟ್ಟರು.
Related Articles
Advertisement
ನೈಜ ಸಂತ್ರಸ್ತರಿಗೆ ನ್ಯಾಯ ಒದಗಿ ಸುವುದು ಮತ್ತು ತಪ್ಪಿತಸ್ಥರನ್ನು ಶಿಕ್ಷಿಸುವುದು ನ್ಯಾಯಾಲಯದ ಉದ್ದೇಶ. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಸಂಕೋಲೆಗಳಿಂದ ತಪ್ಪಿಸಿಕೊಳ್ಳಬಾರದು ಎಂದು ಅಭಿಪ್ರಾಯಪಟ್ಟರು.
ತನಿ ಖಾಧಿಕಾರಿಗಳ ಪ್ರಕಾರ 32 ಮಂದಿ ಮಾತ್ರ ಕಳಂಕಿತರಿದ್ದಾರೆ, ಆದರೆ ಆಯ್ಕೆಯಾದ ಎಲ್ಲರನ್ನೂ ಸಂಶಯ ದಿಂದ ನೋಡಲಾಗುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಪಿಎಸ್‌ಐ ನೇಮಕಕ್ಕೆ 50 ಸಾವಿರ ಮಂದಿ ಪರೀಕ್ಷೆ ಬರೆದಿದ್ದರು. ಅವರೆಲ್ಲರೂ ನೊಂದವರು ಮತ್ತು ಸಂತ್ರಸ್ತರು. ಅಕ್ರಮದಲ್ಲಿ ಮಧ್ಯವರ್ತಿಗಳ ಪ್ರಧಾನ ಪಾತ್ರವಿದೆ ಎಂದರು.
ವರದಿ ಸಲ್ಲಿಸಲು ಸೂಚನೆ :
ಸಿಐಡಿ ಪರ ವಕೀಲರು ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿ ಅಮೃತ್ ಪೌಲ್ ಬಂಧನ ವಾದ ಅನಂತರದ ತನಿಖಾ ಪ್ರಗತಿ ವರದಿಯನ್ನು ಸಲ್ಲಿಸಿದರು. ತಿದ್ದುಪಡಿಗೊಳಿಸಿದ 32 ಒಎಂಆರ್ ಶೀಟ್‌ಗಳನ್ನೂ ಸಲ್ಲಿಸ
ಲಾಯಿತು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, “ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ’ (ಆರ್‌ಎಫ್ಎಸ್‌ಎಲ್) ವರದಿ, ತಿದ್ದುಪಡಿ ಮಾಡಲಾದ ಒಎಂಆರ್ ಹಾಳೆಗಳ ಪ್ರತಿಗಳು, ಅಕ್ರಮದ ವಿಧಾನಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಏಳು ದಿನಗಳಲ್ಲಿ ಸಲ್ಲಿಸುವಂತೆ ಸಿಐಡಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಜು. 14ಕ್ಕೆ ಮುಂದೂಡಿತು.