Advertisement
ಈ ವಿಚಾರವಾಗಿ ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿಯ ರಾಷ್ಟ್ರೀಯ ಅಧ್ಯಕ್ಷ ಚಿ.ನಾ. ರಾಮು ಮತ್ತು ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ದೇವರಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ ನ್ಯಾಯ ಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಪೆನ್‌ಡ್ರೈವ್‌ಗಳನ್ನು ಹಂಚಿದ ಆರೋಪದ ಸಂಬಂಧ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ತನಿಖೆಗೆ ಮಧ್ಯಾಂತರ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್ ತನಿಖೆ ಮುಂದುವರಿಸುವಂತೆ ಸೂಚಿಸಿದೆ.
ಪ್ರೀತಂ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.