Advertisement

ಹೈಕೋರ್ಟ್‌ ಸಿಜೆಗೆ ಸುಪ್ರೀಂಗೆ ಪದೋನ್ನತಿ 

12:40 AM Jan 12, 2019 | Team Udayavani |

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಅವರನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ಪದನ್ನೋತಿ ನೀಡಲು ಸುಪ್ರೀಂಕೋರ್ಟ್‌ನ ಕೊಲಿ ಜಿಯಂ ಶಿಫಾರಸು ಮಾಡಿದೆ.

Advertisement

ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಈ ಶಿಫಾರಸು ಮಾಡಿದೆ. ಇದೇ ವೇಳೆ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರಿಗೂ ಸಹ ಸುಪ್ರೀಂಕೋರ್ಟ್‌ಗೆ ಪದೋನ್ನತಿ ನೀಡುವಂತೆ ಕೊಲಿಜಿಯಂ ಶಿಫಾರಸು ಮಾಡಿದೆ. ಮೂಲತಃ ರಾಜಸ್ಥಾನದವರಾದ ನ್ಯಾ.ದಿನೇಶ್‌ ಮಹೇಶ್ವರಿ ಅವರು 2018ರ ಫೆ.12ರಿಂದ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next