ಬೆಂಗಳೂರು : ಕಾಂಗ್ರೆಸ್ ಪಾದಯಾತ್ರೆ ವಿಚಾರವಾಗಿ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ವಿಚಾರಕ್ಕೆ ಸಂಬಂಧಿಸಿ ಸಚಿವ ಡಾ.ಅಶ್ವಥನಾರಾಯಣ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದ್ದು, ತ್ವರಿತವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದಿಂದ ಎಲ್ಲಾ ಹಂತದಲ್ಲೂ ಕ್ರಮ ವಹಿಸಿದ್ದೇವೆ. ಕಾಂಗ್ರೆಸ್ ನವರು ಜವಾಬ್ದಾರಿ ಇಲ್ಲದ ಜನಪ್ರತಿನಿಧಿಗಳಾಗಿ ಸಂಪೂರ್ಣ ಜವಾಬ್ದಾರಿ ಮರೆತಿದ್ದಾರೆ. ಕ್ರಮ ವಹಿಸಿ, ಕೇಸ್ ದಾಖಲಿಸಲಾಗಿದೆ. ಬಂಧಿಸುವುದು ಮತ್ತೊಂದರ ಬಗ್ಗೆ ಮುಖ್ಯ ಮಂತ್ರಿಗಳು ಜವಾಬ್ದಾರಿಯುತವಾಗಿ ಕ್ರಮ ತೆಗೆದುಕೊಳ್ಳುತ್ತಾರೆ.ರೂಲ್ಸ್ ಗಾಳಿಗೆ ತೂರಿ, ಕೋವಿಡ್ ಇಲ್ಲ ಎಂದು ಹೇಳುತ್ತಾರೆ. ಇವರಿಗೆ ಯಾರು ಬುದ್ದಿ ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ : ಅನುಮತಿ ನೀಡಿಲ್ಲ ಎಂದಾದ ಮೇಲೆ ಪಾದಯಾತ್ರೆ ತಡೆಯಲು ಹಿಂಜರಿಕೆ ಏಕೆ: ಸರ್ಕಾರಕ್ಕೆ ಹೈಕೋರ್ಟ್
ಕಾಂಗ್ರೆಸ್ ನಾಯಕರಿಗೆ ಸೂಕ್ಷ್ಮವಾಗಿ ಹೇಳಲು ಪ್ರಯತ್ನಿಸಿದ್ದೇವೆ. ಆದರೂ ಸ್ಪಂದಿಸಲಿಲ್ಲ. ತಮ್ಮ ಏಳಿಗೆ, ಸ್ವಾರ್ಥಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ತ್ವರಿತವಾಗಿ ಕಾಂಗ್ರೆಸ್ ನಾಯಕರ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು. ಜೀವ ರಕ್ಷಣೆ ಹಾಗೂ ಜೀವನೋಪಾಯ ಎರಡೂ ಮುಖ್ಯ ಎಂದರು.
ಕಾಂಗ್ರೆಸ್ ಪಾದಯಾತ್ರೆಯ ಬಗ್ಗೆ ಸರ್ಕಾರದ್ದು ಮೃದು ಧೋರಣೆ ಆಗಿದೆ. ಅದನ್ನ ಸರಿ ಪಡಿಸಲು ಪ್ರಯತ್ನ ಮಾಡುತ್ತೇವೆ ಎಂದರು.