ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯ ಮೂರ್ತಿಗಳಾಗಿ ಮೊಹಮ್ಮದ್ ನವಾಜ್ ಮತ್ತು ಹರೆಕೊಪ್ಪ ತಿಮ್ಮಣ್ಣಗೌಡ ನರೇಂದ್ರ ಪ್ರಸಾದ್ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.
Advertisement
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಪ್ರಮಾಣ ವಚನ
ಬೋಧಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಹಾಗೂ ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯಾಧೀಶರು ಉಪಸ್ಥಿತರಿದ್ದರು.