Advertisement

High Court: ಜಯಲಲಿತಾ ಸಂಬಂಧಿಗೆ ಚಿನ್ನ, ವಸ್ತು ಮರಳಿಸಲು ಹೈ ನಕಾರ

02:16 PM Jan 14, 2025 | Team Udayavani |

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜೆ. ಜಯಲಲಿತಾ ಅವರಿಂದ ವಶಪಡಿಸಿಕೊಳ್ಳಲಾದ ನೂರಾರು ಕೋಟಿ ರೂ. ಮೌಲ್ಯದ ಚಿನ್ನಾಭರಣ ಸೇರಿ ಇತರೆ ವಸ್ತು ಗಳನ್ನು ತಮಗೆ ಬಿಡುಗಡೆ ಮಾಡಬೇಕು ಎಂದು ಜಯಲಲಿತಾ ಅವರ ಸಹೋದರನ ಮಕ್ಕಳಿಬ್ಬರು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ ವಜಾ ಮಾಡಿದೆ.

Advertisement

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿದ್ದ ಜಯ ಲಲಿತಾ ಅವರ ಸಹೋದರ ಜಯಕು ಮಾರ್‌ ಮಕ್ಕಳಾದ ಜೆ.ದೀಪಕ್‌ ಮತ್ತು ಜೆ.ದೀಪಾ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿ ಗಳನ್ನು ಆಲಿಸಿ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ವಿ.ಶ್ರೀಶಾ ನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.

ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯದ ಸುಪರ್ದಿಯಲ್ಲಿರುವ, ಜಯಲಲಿತಾ ಅವರು ಅಕ್ರಮವಾಗಿ ಗಳಿಸಿದ್ದ ಆಭರಣ ಮತ್ತು ಸ್ಥಿರಾಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆ ಮುಂದುವರಿಯಲಿದೆ. ಜಯಲಲಿತಾ ಅವರಿಂದ 7,040 ಗ್ರಾಂ ಚಿನ್ನ, ವಜ್ರ ಖಚಿತ ಆಭರಣ ಸೇರಿ ಹಲವು ವಸ್ತು ಜಪ್ತಿ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.