Advertisement

ಕೆಎಟಿ ಅಧ್ಯಕ್ಷರ ಮನವಿ ತಿರಸ್ಕರಿಸಿದ ಹೈಕೋರ್ಟ್‌

11:05 PM Jun 18, 2019 | Team Udayavani |

ಬೆಂಗಳೂರು: ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಸರಿಸಮಾನವಾದ ವೇತನವನ್ನು ತಮಗೂ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಅಧ್ಯಕ್ಷ ನ್ಯಾ ಕೆ.ಭಕ್ತವತ್ಸಲ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ ವಿಭಾಗೀಯ ಪೀಠ ಮಂಗಳವಾರ ವಜಾಗೊಳಿಸಿದೆ.

Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ಹಾಗೂ ನ್ಯಾ.ಎಚ್‌.ಟಿ. ನರೇಂದ್ರ ಪ್ರಸಾದ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ನೀಡಲಾಗುವ ವೇತನವನ್ನು ಕೆಎಟಿ ಅಧ್ಯಕ್ಷರಿಗೆ ನೀಡಲಾಗದು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ನೀಡುವ ವೇತನವನ್ನು ಕೆಎಟಿ ಅಧ್ಯಕ್ಷರಿಗೆ ನೀಡಲಾಗದು. ಹೈಕೋರ್ಟ್‌ ನ್ಯಾಯಮೂರ್ತಿಗಳು ಪಡೆಯುವಷ್ಟು ಮಾತ್ರ ವೇತನ ಪಡೆಯಲು ಕೆಎಟಿ ಅಧ್ಯಕ್ಷರು ಅರ್ಹತೆ ಹೊಂದಿರುತ್ತಾರೆ ಎಂದು ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ನ್ಯಾ.ಭಕ್ತವತ್ಸಲ ಮೇಲ್ಮನವಿ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next