Advertisement
ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಆದೇಶ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ದಂಡದ ಮೊತ್ತದಲ್ಲಿ ಶೇ 25 ರಷ್ಟು ಕೋರ್ಟ್ ನಲ್ಲಿ ಠೇವಣಿ ಇಡುವಂತೆ ಷರತ್ತು ವಿಧಿಸಿದೆ. 6 ವಾರದಲ್ಲಿ ಠೇವಣಿ ಇಡುವಂತೆ ಅಪರಾಧಿಗಳಿಗೆ ಸೂಚಿಸಿ ಶಿಕ್ಷೆ ಅಮಾನತು ಮಾಡಿದೆ. ನಾಳೆ(ಗುರುವಾರ) ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
Related Articles
ಅಂಕೋಲಾ ತಾಲೂಕಿನ ಬೇಲೆಕೇರಿ ವ್ಯಾಪ್ತಿಯಲ್ಲಿ 2009- 2010ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ, 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸುಮಾರು 11,312 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಜಪ್ತಿ ಮಾಡಿದ್ದರು. ಈ ಅದಿರನ್ನು ಬೇಲೆಕೇರಿ ಬಂದರಿನ ಅಧಿಕಾರಿ ಮಹೇಶ್ ಬಿಳಿಯ ಅವರ ಸುಪರ್ದಿಗೆ ನೀಡಿದ್ದರು. ಆದರೆ ಮಹೇಶ್ ಬಿಳಿಯ, ಶಾಸಕ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳು ಈ ಅದಿರು ಕಳವು ಮಾಡಲು ಒಳ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿತ್ತು. ಆರೋಪಿಗಳ ಪೈಕಿ ಕೆಲವರು ಸತೀಶ್ ಸೈಲ್ಗೆ ಕಡಿಮೆ ಮೊತ್ತಕ್ಕೆ ಜಪ್ತಿ ಮಾಡಿದ ಅದಿರನ್ನು ಮಾರಾಟ ಮಾಡಿದ್ದರು. ಇನ್ನು ಸತೀಶ್ ಸೈಲ್ ಪ್ರತ್ಯೇಕವಾಗಿ ತಮ್ಮ ಕಂಪೆನಿಗಳ ಮೂಲಕ ಅದಿರನ್ನು ವಿದೇಶಕ್ಕೆ ರಫ್ತು ಮಾಡಿದ್ದರು ಎನ್ನಲಾಗಿದೆ.
Advertisement
ಶಾಸಕ ಸತೀಶ್ ಸೈಲ್ ಮತ್ತು ಅಂದಿನ ಬಂದರು ಅಧಿಕಾರಿ ಮಹೇಶ್ ಬಿಳಿಯ ಸೇರಿ 7 ಮಂದಿ ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು.