Advertisement

High Court: ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ: ಮೂರು ಅರ್ಜಿ ವಜಾ

12:39 AM Aug 31, 2024 | Team Udayavani |

ಬೆಂಗಳೂರು: ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು. ಪ್ರಕರಣದಿಂದ ಆರೋಪಿ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶ ರದ್ದು ಪಡಿಸಬೇಕು ಮತ್ತು ಸಂತೋಷ್‌ಗೆ ಪರಿಹಾರ ನೀಡಬೇಕು ಎಂದು ಸಲ್ಲಿಕೆಯಾಗಿದ್ದ ಮೂರೂ ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ.

Advertisement

ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸೌಜನ್ಯಾ ತಂದೆ ಧರ್ಮಸ್ಥಳದ ನಿವಾಸಿ ಚಂದಪ್ಪ ಗೌಡ ಹೈಕೊರ್ಟ್‌ ಮೊರೆ ಹೋಗಿದ್ದರು. ಇನ್ನು ಪ್ರಕರಣದಲ್ಲಿ ಕಾರ್ಕಳ ತಾಲೂಕಿನ ಕುಕ್ಕುಂದೂರಿನ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ರದ್ದುಪಡಿಸಬೇಕು ಎಂದು ಸಿಬಿಐ ಹೈಕೋರ್ಟ್‌ಗೆ ಕ್ರಿಮಿನಲ್‌ ಮೇಲ್ಮನವಿ ಸಲ್ಲಿಸಿತ್ತು, ಇದರ ಜತೆಗೆ ತನ್ನನ್ನು ಬಂಧನದಲ್ಲಿರಿಸಿ ನಡೆಸಿದ ಅಭಿಯೋಜನೆಗೆ ಪರಿಹಾರ ಕೋರಿ ಸಂತೋಷ್‌ ರಾವ್‌ ಮತ್ತೂಂದು ತಕರಾರು ಅರ್ಜಿ ಸಲ್ಲಿಸಿದ್ದರು.

ಈ ಮೂರು ಅರ್ಜಿಗಳನ್ನು ವಜಾಗೊಳಿಸಿ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಮತ್ತು ನ್ಯಾಯಮೂರ್ತಿ ಜೆ.ಎಂ. ಖಾಜಿ ಅವರ ವಿಭಾಗೀಯ ಪೀಠ ಶುಕ್ರವಾರ ತೀರ್ಪು ನೀಡಿದೆ. ಸಂತೋಷ್‌ ರಾವ್‌, ಪ್ರಕರಣದಲ್ಲಿ ಸೂಕ್ತ ತನಿಖೆ ನಡೆಸದ ತನಿಖಾಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ತನ್ನ ವಿರುದ್ಧ ತನಿಖಾಧಿಕಾರಿಗಳು ದುರುದ್ದೇಶಪೂರಿತ ಪ್ರಾಸಿ ಕ್ಯೂಷನ್‌ ನಡೆಸಿದ ಹಿನ್ನೆಲೆಯಲ್ಲಿ 50 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಸರಕಾರಕ್ಕೆ ಅದೇಶಿಸ ಬೇಕು ಎಂದು ಕೋರ್ಟಿಗೆ ಮನವಿ ಮಾಡಿದ್ದ. ಸೌಜನ್ಯಾ ಅತ್ಯಾಚಾರ ಪ್ರಕರಣ 2012ರ ಅಕ್ಟೋಬರ್‌ 9ರಂದು ನಡೆದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next