Advertisement

ಡಿಕೆಶಿ ಬೆನ್ನಿಗೆ ನಿಂತ ಹೈಕಮಾಂಡ್‌

06:00 AM Sep 11, 2018 | Team Udayavani |

ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ ವಿಚಾರದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಎಫ್ಐಆರ್‌ “ತೂಗುಕತ್ತಿ’ ಸಂಕಷ್ಟಕ್ಕೆ ಸಿಲುಕಿರುವ ಡಿ.ಕೆ.ಶಿವಕುಮಾರ್‌ ನೆರವಿಗೆ ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ.

Advertisement

ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಶಿವಕುಮಾರ್‌ ವಿರುದ್ಧದ ಪ್ರಕರಣವನ್ನು ಬಿಜೆಪಿ ರಾಜಕೀಯವಾಗಿ ಬಳಕೆ
ಮಾಡಿಕೊಳ್ಳುತ್ತಿದೆ ಎಂದು ಬಿಂಬಿಸಲು ತೀರ್ಮಾನಿಸಿದೆ.

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದ ಡಿ.ಕೆ.ಶಿವಕುಮಾರ್‌, ಅಹ್ಮದ್‌ ಪಟೇಲ್‌ ಸೇರಿ
ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಸಂಪರ್ಕಿಸಿ ವಿವರಣೆ ನೀಡಿದ್ದಾರೆ. ನಾನು ಕಾನೂನಾತ್ಮಕವಾಗಿ ಪ್ರಕರಣ
ಎದುರಿಸಲು ಸಿದಟಛಿತೆ ಮಾಡಿಕೊಂಡಿದ್ದೇನೆ. ಆದರೂ ಬಿಜೆಪಿಯು ಆದಾಯ ತೆರಿಗೆ ಇಲಾಖೆ, ಇಡಿ ಬಳಸಿ ಕಿರುಕುಳ ನೀಡುತ್ತಿದೆ ಎಂದು ಅಲವತ್ತುಕೊಂಡಿದ್ದಾರೆ.

ಆ ಸಂದರ್ಭದಲ್ಲಿ ನಿಮ್ಮ ಜತೆ ಹೈಕಮಾಂಡ್‌ ಇದೆ. ತಲೆಕಡಿಸಿಕೊಳ್ಳಬೇಡಿ. ಕಾನೂನು ಹೋರಾಟ ಮುಂದುವರಿಸಿ ಎಂದು ಭರವಸೆ ನೀಡಿದ್ದಾರೆಂದು ಹೇಳಲಾಗಿದೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಜೆಡಿಎಸ್‌ ಸಹ ಜತೆ ನಿಂತಿದ್ದು, ಎಚ್‌.ಡಿ.ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ಡಿಕೆಶಿ ಅವರಿಗೆ ಧೈರ್ಯ ತುಂಬಿದ್ದಾರೆ.

ರಮೇಶ್‌ ಸಂಪರ್ಕ: ಬೆಳಗಾವಿ ಪಿಎಲ್‌ಡಿ ಬ್ಯಾಂಕ್‌ ಚುನಾವಣೆ ವಿಚಾರದಲ್ಲಿ ಜಾರಕಿಹೊಳಿ ಸಹೋದರ ಅಸಮಾಧಾನವನ್ನೇ ಅಸOಉ ಮಾಡಿಕೊಳ್ಳುವ ಬಿಜೆಪಿ ಪ್ರಯತ್ನ ವಿಫ‌ಲಗೊಳಿಸಲು ಕಾಂಗ್ರೆಸ್‌ ಹೈಕಮಾಂಡ್‌ ಸಹ ಮುಂದಾಗಿದೆ. ಸಚಿವ ರಮೇಶ್‌ ಜಾರಕಿಹೊಳಿ ಬಿಜೆಪಿ ನಾಯಕರೊಂದಿಗೆ ಸೋಮವಾರ ಮಾತುಕತೆ ನಡೆಸುತ್ತಾರೆಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರು ರಮೇಶ್‌ ಜಾರಕಿಹೊಳಿ ಜತೆಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ರಮೇಶ್‌ ಜಾರಕಿಹೊಳಿಗೆ ದೂರವಾಣಿ ಕರೆ ಮಾಡಿ, ಸದ್ಯದ ಬೆಳವಣಿಗೆಗಳ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Advertisement

ನಾನು ಬಿಜೆಪಿ ಸೇರುವ ಬಗ್ಗೆ ಯಾರೂ ನನ್ನೊಂದಿಗೆ ಚರ್ಚೆ ನಡೆಸಿಲ್ಲ. ರಮೇಶ್‌ ಜಾರಕಿಹೊಳಿ ಜತೆಗೆ ಯಾರು ಸಂಪರ್ಕ
ಮಾಡಿದ್ದಾರೆ ಎನ್ನುವುದು ಗೊತ್ತಿಲ್ಲ. ಈ ಬಗ್ಗೆ ಮಂಗಳವಾರ ಬೆಳಗ್ಗೆ ರಮೇಶ್‌ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ.

– ಸತೀಶ್‌ ಜಾರಕಿಹೊಳಿ, ಶಾಸಕ

Advertisement

Udayavani is now on Telegram. Click here to join our channel and stay updated with the latest news.

Next