Advertisement
ಬಿಬಿಎಂಪಿಗೆ ಶೀಘ್ರ ಚುನಾವಣೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತ ಮಹತ್ವದ ತೀರ್ಪನ್ನು ಹೈಕೋರ್ಟ್ ಪ್ರಕಟಿಸಿತು. ಅರ್ಜಿಗೆ ಸಂಬಂಧಿಸಿದಂತೆ ವಾದ- ಪ್ರತಿವಾದ ಆಲಿಸಿದ ಬಳಿಕ ತೀರ್ಪು ಕಾಯ್ದಿರಿಸಿದ್ದ ಮುಖ್ಯ ನ್ಯಾ. ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಇಂದು ತೀರ್ಪು ನೀಡಿದೆ.
Related Articles
Advertisement
2020 ನ.10ಕ್ಕೆ ಪಾಲಿಕೆ ಅವಧಿ ಮುಗಿದ ಹಿನ್ನೆಲೆಯಲ್ಲಿ ಶೀಘ್ರವಾಗಿ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಮಾಜಿ ಪಾಲಿಕೆ ಸದಸ್ಯ ಶಿವರಾಜು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಚುನಾವಣಾ ಆಯೋಗ ಸಹ
ಹೈಕೋರ್ಟ್ ಮೊರೆ ಹೋಗಿತ್ತು. ಈ ಮಧ್ಯೆ ಪಾಲಿಕೆಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಯಿತು. ಇದನ್ನೂ ಸಹ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು. ಈ ಮಧ್ಯೆ ಪಾಲಿಕೆ ವಾರ್ಡ್‌ಗಳ ಸಂಖ್ಯೆಯನ್ನು ಹೆಚ್ಚಿಸಿ ಸರ್ಕಾರ ಕಾಯ್ದೆ ಜಾರಿಗೆ ತಂದಿತು. ಇದಕ್ಕೆ ಆಯೋಗ ಮತ್ತು ಅರ್ಜಿದಾರರು ಅಕ್ಷೇಪಿಸಿದರು. ಇದು ಚುನಾವಣೆಯನ್ನು ದೀರ್ಘಾವಧಿಗೆ ಮುಂದೂಡುವ ಪ್ರಯತ್ನ ಎಂದು ಹೈಕೋರ್ಟ್ ಹೇಳಿತ್ತು. ಈಗಿನ 198 ವಾರ್ಡ್‌ಗಳಿಗೆ ಅನುಗುಣವಾಗಿ ಮತದಾರರ ಪಟ್ಟಿ ಹಾಗೂ ಮೀಸಲಾತಿ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಆಯೋಗ ವಾದಿಸಿತ್ತು. ಇದೀಗ 198 ವಾರ್ಡ್ ಗಳಿಗೆ ಚುನಾವಣೆ ಮಾಡುವಂತೆ ಕೋರ್ಟ್ ಸೂಚಿಸಿರುವ ಕಾರಣ ಸರ್ಕಾರಕ್ಕೆ ಹಿನ್ನಡೆಯಾಗಿದೆ.