Advertisement

SJM ವಿದ್ಯಾಪೀಠದ ಸಿಇಒಗೆ ಹೈಕೋರ್ಟ್‌ ಸಮನ್ಸ್‌ ಜಾರಿ

11:09 PM Jan 12, 2024 | Pranav MS |

ಬೆಂಗಳೂರು: ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರ ವರ್ಗಾವಣೆಗೆ ಸಂಬಂಧಿಸಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದ ಚಿತ್ರದುರ್ಗ ಮುರುಘಾ ಮಠದ ಎಸ್‌ಜೆಎಂ ವಿದ್ಯಾಪೀಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ, ಉದ್ಯಮಿ ಎಂ. ಭರತ್‌ ಕುಮಾರ್‌ ಅವರ ಮೇಲೆ ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಆರೋಪದಡಿ ಸಮನ್ಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

Advertisement

ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಅವರು ಸ್ವಯಂಪ್ರೇರಿತವಾಗಿ ದಾಖಲಿಸಿ ಕೊಂಡಿರುವ ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ಈ ಆದೇಶ ನೀಡಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ-2012ರ (ಪೋಕ್ಸೋ) ವಿವಿಧ ಆರೋಪದಡಿ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಜೈಲು ಸೇರಿದ ಅನಂತರ ರಾಜ್ಯ ಸರಕಾರ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌. ವಸ್ತ್ರದ್‌ ಅವರನ್ನು 2022ರ ಡಿ. 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ಆದರೆ ಇದಕ್ಕೂ ಮುನ್ನ 2022ರ ಡಿ. 2ರಂದು ಎಸ್‌ಜೆಎಂ ವಿದ್ಯಾಪೀಠದ ಕಾರ್ಯ ನಿರ್ವಹಣಾಧಿಕಾರಿಯಾಗಿ ಎಂ. ಭರತ್‌ ಕುಮಾರ್‌ ಅವರನ್ನು ಶರಣರು ನೇಮಕ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next