ಮುಂಬಯಿ: ತಾಯಿ-ಮಗನ ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ಬಂಧಿತರಾಗಿರುವ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರು ಮಧ್ಯಾಂತರ ಜಾಮೀನು ಕೋರಿ ಗುರುವಾರ ಬಾಂಬೆ ಹೈಕೋರ್ಟ್ ಮೊರೆಹೋಗಿದ್ದು, ನ್ಯಾಯಾಲಯವು ಶುಕ್ರವಾರ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಹೇಳಿದೆ.
ಎರಡು ವರ್ಷಗಳ ಹಿಂದೆ ನಡೆದ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣದ ಸಂಬಂಧ ಪತ್ರಕರ್ತ ಅರ್ನಾಬ್ ಗೋಸ್ವಾಮಿಯನ್ನು ಬುಧವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದರು. ನಂತರ ಮ್ಯಾಜಿಸ್ಟ್ರೇಟ್ ಕೋರ್ಟ್ ಅರ್ನಾಬ್‌ರನ್ನು ನ.18ರ ವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶ ನೀಡಿತ್ತು. ಹೀಗಾಗಿ ಅವರು ಜಾಮೀನು ಕೋರಿ ಹೈಕೋರ್ಟ್ ಮೊರೆಹೋಗಿದ್ದರು.
ಅರ್ನಾಬ್ ಗೋಸ್ವಾಮಿ ಪರ ವಾದ ಮಂಡಿಸಿದ ಹಿರಿಯ ವಕೀಲ ಅಬಾದ್ ಪೊಂಡಾ, ಅಲಿಬಾಗ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಾಪಸ್ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಬಹುಮತವಿಲ್ಲದೆ ಕುತೂಹಲ ಸೃಷ್ಟಿಸಲಿದೆ ಚುನಾವಣೆ
‘ಜಾಮೀನು ಅರ್ಜಿ ವಿಚಾರಣೆ ಯಾವಾಗ ನಡೆಯಲಿದೆ ಎಂಬ ಬಗ್ಗೆ ಮ್ಯಾಜಿಸ್ಟ್ರೇಟ್ ಸ್ಪಷ್ಟನೆ ನೀಡಿಲ್ಲ, ಸೆಷನ್ಸ್ ಕೋರ್ಟ್ ನ ವ್ಯಾಪ್ತಿಯಲ್ಲಿ ಪ್ರಕರಣ ಇರುವುದರಿಂದ ವಿಚಾರಣೆ ವೇಳೆಯೂ ಸಹ ಈ ಬಗ್ಗೆ ಸ್ಪಷ್ಟತೆ ಇಲ್ಲ. ಹೀಗಾಗಿ, ಮಧ್ಯಂತರ ಜಾಮೀನು ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುತ್ತಿದ್ದೇವೆ’ ಎಂದು ಪೊಂಡಾ ಹೇಳಿದ್ದಾರೆ.