Advertisement

ಗಣ್ಯರಿಂದ ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ: ಸರಕಾರದ ನಿಲುವು ಕೇಳಿದ ಹೈಕೋರ್ಟ್‌

07:21 PM Nov 13, 2020 | mahesh |

ಬೆಂಗಳೂರು: ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಂತಾದ ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಗಣ್ಯರು, ರಾಜಕಾರಣಿಗಳ ವಿರುದ್ಧ ಪರಿಣಾಮಕಾರಿ ಕ್ರಮ ಜರಗಿಸುವ ಬಗ್ಗೆ ಖಚಿತ ನಿಲುವು ತಿಳಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Advertisement

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕೋರಿ ಲೆಟ್ಜ್ ಕಿಟ್‌ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ| ಎ. ಎಸ್‌. ಓಕ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ವಾದ – ಪ್ರತಿವಾದ ಆಲಿಸಿದ ನ್ಯಾಯಪೀಠ, 2020ರ ಎಪ್ರಿಲ್‌ 22ರಂದು ರಾಜ್ಯ ಸರಕಾರ ಹೊರಡಿಸಿರುವ ಸಾಂಕ್ರಾಮಿಕ ರೋಗಗಳ ತಡೆ ಸುಗ್ರೀವಾಜ್ಞೆ ಪ್ರಕಾರ ನಿಯಮ ಉಲ್ಲಂಘಿಸಿದ ಪ್ರಕರಣಗಳಲ್ಲಿ 3 ವರ್ಷದವರೆಗೆ ಜೈಲು ಹಾಗೂ 50 ಸಾವಿರದವರೆಗೆ ದಂಡ ವಿಧಿಸಲು ಅವಕಾಶವಿದೆ.

ಚುನಾವಣಾ ರ್ಯಾಲಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಗಣ್ಯರು ಹಾಗೂ ರಾಜಕಾರಣಿಗಳು ಕೋವಿಡ್‌ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಮಾಸ್ಕ ಧರಿಸದೇ ಇರುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿರುವುದು ವ್ಯಾಪಕವಾಗಿ ಕಂಡು ಬಂದಿದೆ. ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಗಣ್ಯ ವ್ಯಕ್ತಿಗಳಲ್ಲಿ ಕೆಲವರ ವಿರುದ್ಧ ಮಾತ್ರ ಎನ್‌ಸಿಆರ್ ದಾಖಲಿಸಿ, ಸಣ್ಣ ಮೊತ್ತದ ದಂಡವನ್ನು ವಿಧಿಸಲಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಜಾರಿ ಮಾಡಿರುವ ಸುಗ್ರೀವಾಜ್ಞೆ ಅಡಿ ಕ್ರಮ ಕೈಗೊಂಡಿಲ್ಲವೇಕೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಕಾಯ್ದೆ ಅಡಿ ಪ್ರಕರಣ ದಾಖಲಿಸುವ ಹಾಗೂ ಕ್ರಮ ಜರುಗಿಸುವ ಕುರಿತು ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಹೈಕೋರ್ಟ್‌ ನಿರ್ದೇಶಿಸಿದೆ.

ಇನ್ನು ರಾಜಕೀಯ ಪಕ್ಷಗಳು, ಸಂಘಟನೆಗಳು ರ್ಯಾಲಿಗೆ ಪೊಲೀಸರ ಅನುಮತಿ ನೀಡುತ್ತಾರೆ. ಹೀಗಾಗಿ ರ್ಯಾಲಿ ಸಂದರ್ಭದಲ್ಲಿ ನಿಯಮ ಪಾಲಿಸದಿದ್ದರೆ ಪೊಲೀಸರೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next