Advertisement

ವಲಸೆ ಕಾರ್ಮಿಕರ ಮಾಹಿತಿ ಕೇಳಿದ ಹೈಕೋರ್ಟ್‌

07:08 AM May 13, 2020 | Lakshmi GovindaRaj |

ಬೆಂಗಳೂರು: ಲಾಕ್‌ಡೌನ್‌ನಿಂದ ಕರ್ನಾಟಕದಲ್ಲಿ ಸಿಲುಕಿಕೊಂಡಿರುವ ಹೊರ ರಾಜ್ಯಗಳ ವಲಸೆ ಕಾರ್ಮಿಕರನ್ನು ಅವರ ಸ್ವಂತ ಊರುಗಳಿಗೆ ಕಳುಹಿಸಿಕೊಡಲು ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡುವಂತೆ ಸರ್ಕಾರಕ್ಕೆ  ಹೈಕೋರ್ಟ್‌ ನಿರ್ದೇಶನ ನೀಡಿದೆ.

Advertisement

ಈ ಕುರಿತು ಆಲ್‌ ಇಂಡಿಯಾ ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಟ್ರೇಡ್‌ ಯೂನಿಯನ್‌ (ಎಐಸಿಸಿಟಿಯು) ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ  ಎ.ಎಸ್‌.ಓಕಾ ಹಾಗೂ ನ್ಯಾ.ಬಿ.ವಿ.ನಾಗರತ್ನ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ಈ ಸೂಚನೆ ನೀಡಿತು. ಹೊರ ರಾಜ್ಯದ ವಲಸೆ ಕಾರ್ಮಿಕರನ್ನು ಅವರ ಸ್ವಂತ ಊರುಗಳಿಗೆ ಕಳುಹಿಸಲು ಯಾವ ವ್ಯವಸ್ಥೆ ಮಾಡಲಾಗಿದೆ, ಈವರೆಗೂ ಕರ್ನಾಟಕದಿಂದ ಎಷ್ಟು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಿದ್ದಾರೆ. ಇನ್ನೂ ಹೋಗುವವರ ಸಂಖ್ಯೆ ಎಷ್ಟಿದೆ, ಅವರ ಪ್ರಯಾಣ ವೆಚ್ಚವನ್ನು ಹೇಗೆ ಭರಿಸಲಾಗುತ್ತದೆ,

ಒಂದು ವೇಳೆ ವಾಪಸ್‌ ಮರಳಲು  ಬಯಸಿದರೆ ಅಂತಹ ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಎಂದು ರಾಜ್ಯ ಸರ್ಕಾರವನ್ನು ನ್ಯಾಯಪೀಠ ಪ್ರಶ್ನಿಸಿತು. ಜತೆಗೆ, ನಮ್ಮ ಮೆಟ್ರೋ ರೈಲು ಕಾರ್ಮಿಕರಿಗೆ ವೇತನ ನೀಡುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿದ್ದು, ಆ ವಿಚಾರ ಏನಾಯಿತು?  ಮಾ.24ರವರೆಗೆ ಬೊಮ್ಮನಹಳ್ಳಿ ಕ್ಯಾಂಪಿನಲ್ಲಿ ಎಷ್ಟು ಕಾರ್ಮಿಕರಿದ್ದರು? ಆ ಕ್ಯಾಂಪ್‌ನಿಂದ ಈವರೆಗೆ ಎಷ್ಟು ಜನ ತೆರಳಿದ್ದಾರೆ ಎಂಬ ಬಗ್ಗೆಯೂ ಸಂಪೂರ್ಣ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಮೇ 18ಕ್ಕೆ  ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next