Advertisement
ಈ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ. ಮೇ 4ರೊಳಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೆಚ್ಚುವರಿ ಅಡ್ವೋಕೇಟ್ ಜನರಲ್ ತಿಳಿಸಿದರು. ನ್ಯಾಯಪೀಠ ವಿಚಾರಣೆಯನ್ನು ಮೇ 5ಕ್ಕೆ ಮುಂದೂಡಿತು.
ರೈತರಿಗೆ ಟೋಲ್ ವಿನಾಯಿತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಅರ್ಜಿ ವಿಚಾರಣೆ ವೇಳೆ, ಕೇಂದ್ರ ಸರ್ಕಾರದ ಪರ ಸಹಾಯಕ ಸಾಲಿಸಿಟರ್ ಜನರಲ್ ಅವರು, ಟೋಲ್ ವಿನಾಯಿತಿ ಏ.28ರವರೆಗೆ ಚಾಲ್ತಿಯಲ್ಲಿತ್ತು. ಈ ಮಧ್ಯೆ, ಟೋಲ್ ವಿನಾಯಿತಿ ವಿಚಾರದಲ್ಲಿ ನಿಲುವು ತಿಳಿಸಲು ವಿಚಾರಣೆಗೆ ಹಾಜರಾಗಲು ಅನುಮತಿ ನೀಡಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಇ-ಮೇಲ್ ಕೋರಿಕೆ ಬಂದಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಅದಕ್ಕೆ ಮೇ 5ರ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಉತ್ತರಿಸುವಂತೆ ರಾಷ್ಟ್ರೀಯ ಪ್ರಾಧಿಕಾರಕ್ಕೆ ಸೂಚನೆ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.