ಬೆಂಗಳೂರು: ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಿಷೇಧಿಸಿ ಕೇಂದ್ರ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಪಿಎಫ್ಐ ನಿಷೇಧ ಆದೇಶ ಪ್ರಶ್ನಿಸಿ ಪಿಎಫ್ಐ ಮುಖಂಡ ನಾಸಿರ್ ಅಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಮಾಡಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಇಂದು ಅರ್ಜಿಯನ್ನು ವಜಾಗೊಳಿಸಿದ್ದು, ಕೇಂದ್ರದ ತೀರ್ಪನ್ನು ಎತ್ತಿ ಹಿಡಿದಿದೆ.
ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ ಎನ್ನುವ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಸಪ್ಟೆಂಬರ್ 28ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.
ಇದನ್ನೂ ಓದಿ:37,000 ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲು ತೆರೆಯಲು ಹೋದ ಮಹಿಳೆ… ಮುಂದೇನಾಯ್ತು?
Related Articles
ಇದನ್ನು ಪ್ರಶ್ನಿಸಿ ನಾಸಿರ್ ಅಲಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಪರ ವಾದ ಮಂಡಿಸಿದ ವಕೀಲ ಜಯಕುಮಾರ್ ಎಸ್.ಪಾಟೀಲ್ ಪಿಎಫ್ಐ ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ. ಆದರೆ ಪಿಎಫ್ಐ ಕಾನೂನು ಬಾಹಿರ ಸಂಘಟನೆ ಎನ್ನಲು ಕಾರಣ ನೀಡಿಲ್ಲ. ತಕ್ಷಣದ ಬ್ಯಾನ್ಗೆ ಪ್ರತ್ಯೇಕ ಕಾರಣ ನೀಡಬೇಕಿತ್ತು. ವಾದ ಮಂಡನೆಗೆ ಕಾಲಾವಕಾಶ ನೀಡದೇ ಬ್ಯಾನ್ ಮಾಡಲಾಗಿದೆ. ಯುಎಪಿಎ ಕಾಯ್ದೆಗೆ ವಿರುದ್ಧವಾಗಿ ಆದೇಶ ಹೊರಡಿಸಲಾಗಿದೆ ಎಂದು ವಾದ ಮಂಡಿಸಿದ್ದರು.
ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು “ಪಿಎಫ್‌ಐ ಸಂಘಟನೆ ದೇಶ ವಿರೋಧಿ ಕೃತ್ಯಗಳನ್ನು ನಡೆಸುತ್ತಿತ್ತು. ಅದು ಭಯೋತ್ಪಾದಕ ಸಂಘಟನೆಗಳ ಕೈ ಜೋಡಿಸಿ ದೇಶದಲ್ಲಿ ಹಿಂಸಾತ್ಮಕ ಚಟುವಟಿಕೆಗಳನ್ನು ನಡೆಸುತ್ತಿತ್ತು. ಜೊತೆಗೆ ಸಂಘಟನೆಯ ಸದಸ್ಯರು ರಾಷ್ಟ್ರದಲ್ಲಿ ಭೀತಿಯ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ” ಎಂದು ಸಮರ್ಥನೆ ಮಾಡಿದ್ದರು.