Advertisement

ರಕ್ತ ಪರೀಕ್ಷೆಗೆ ಹೆಚ್ಚು ಶುಲ್ಕ: ಆರೋಗ್ಯ ಇಲಾಖೆ ಎಚ್ಚರಿಕೆ

07:35 AM Aug 18, 2017 | Team Udayavani |

ಬೆಂಗಳೂರು: ಡೆಂಗ್ಯೂ ಹಾಗೂ ಚಿಕೂನ್‌ಗುನ್ಯಾ ಕಾಯಿಲೆ ಪತ್ತೆಯ ರಕ್ತ ಹಾಗೂ ಇತರ ಅಗತ್ಯ ಪರೀಕ್ಷೆಗಳಿಗೆ ಖಾಸಗಿ ಆಸ್ಪತ್ರೆಗಳು ಹೆಚ್ಚಿನ ಹಣ ಪಡೆದುಕೊಂಡರೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

Advertisement

ಖಾಸಗಿ ಆಸ್ಪತ್ರೆಗಳು ರಕ್ತ ಪರೀಕ್ಷೆಗೆ 250 ರೂ.ಗಿಂತ ಮತ್ತು ರಕ್ತ ಹಾಗೂ ಇತರ ಪರೀಕ್ಷೆಗಳಿಗೆ 500 ರೂ.ಗಳಿಗಿಂತ ಹೆಚ್ಚು ಹಣ ಪಡೆಯುವಂತಿಲ್ಲ. ಒಂದು ವೇಳೆ ಹೆಚ್ಚು ಹಣ ಪಡೆಯುತ್ತಿರುವುದು ಗೊತ್ತಾದರೆ ಅಂತಹ ಆಸ್ಪತ್ರೆಗಳ ವಿರುದಟಛಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ ಅಧಿನಿಯಮದಡಿ ಶಿಸ್ತು ಕ್ರಮ ಜರುಗಿಸಬೇಕು.

ಅಲ್ಲದೇ ಖಾಸಗಿ ಆಸ್ಪತ್ರೆಗಳು ಸರ್ಕಾರ ಸೂಚಿಸಿದ ಔಷಧಗಳನ್ನೇ ನೀಡುವ ನೀತಿಯನ್ನು ಅನುಸರಿಸುವಂತೆ ನೋಡಿಕೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸೂಚಿಸಿದ್ದಾರೆ. ಡೆಂ à ಹಾಗೂ ಚಿಕೂನ್‌ ಗುನ್ಯಾ ತಡೆಗಟ್ಟಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಅಂತರ್‌ ಇಲಾಖಾ ಸಭೆಯಲ್ಲಿ ತೆಗೆದುಕೊಳ್ಳಲಾದ ಎಲ್ಲ ನಿರ್ಣಯಗಳನ್ನು ಕಡ್ಡಾಯವಾಗಿ ಪಾಲಿಸಿ ಸೂಚಿಸಿದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next