ಕೋಟ: ಐಎಎಸ್, ಐಪಿಎಸ್ ಪರೀಕ್ಷೆಗಳು ಕಬ್ಬಿಣದ ಕಡಲೆಯಲ್ಲ, ನಾವು ಉನ್ನತ ಅಧಿಕಾರಿಗಳಾಗಬೇಕು ಎನ್ನುವ ದೃಢ ಸಂಕಲ್ಪ ಮನದಲ್ಲಿದ್ದರೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಲು ಸಾಧ್ಯ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.
ಅವರು ಸೆ. 10ರಂದು ಕೋಟ ವಿವೇಕ ವಿದ್ಯಾಸಂಸ್ಥೆಯ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ವಿ-ಶೈನ್ ಕೋಚಿಂಗ್ ಸೆಂಟರ್, ಕೋಟ ಸಿಟಿ ರೋಟರಿ ಕ್ಲಬ್, ಮಣೂರು ಗೀತಾನಂದ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಜರಗಿದ ಎಫ್.ಡಿ.ಎ., ಎಸ್.ಡಿ.ಎ., ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ನಡೆದ ಉಚಿತ ಕಾರ್ಯಗಾರದ ಉದ್ಘಾಟನಾ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.
ಸ್ಮರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ನಿಟ್ಟಿನಲ್ಲಿ, ಜಿಲ್ಲೆಯಲ್ಲಿ ಮುಂದೆ ಹೊಸದಾಗಿ ಆರಂಭಗೊಳ್ಳುವ ಗ್ರಂಥಾಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಗಳಿಗೆ ಸಂಬಂಧಿಸಿದ ಪುಸ್ತಕಗಳಿರುವ ಪ್ರತ್ಯೇಕ ವಿಭಾಗವನ್ನು ತೆರೆಯಲಾಗುವುದು ಎಂದು ಹೇಳಿದ್ದಾರೆ.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕೋಟ ಮಣೂರು ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ ಸಿ.ಕುಂದರ್, ಕರಾವಳಿ ಪರಿಸರದ ಉದ್ಯೋಗಾಕಾಂಕ್ಷಿಗಳಿಗೆ ಈ ತರಬೇತಿ ಕಾರ್ಯಾಗಾರದಿಂದ ಹೆಚ್ಚು ಉಪಯೋಗವಾಗಲಿದೆ ಎಂದರು.
ರೋಟರಿ ಕ್ಲಬ್ ಕೋಟ ಸಿಟಿಯ ಅಧ್ಯಕ್ಷ ಸುಬ್ರಾಯ ಆಚಾರ್ಯ, ಕುಂದಾಪುರ ವೃಂದಾವನ ಕೋಚಿಂಗ್ ಅಕಾಡೆಮಿಯ ಮುಖ್ಯಸ್ಥ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ಕೋಟ ವಿದ್ಯಾ ಸಂಘದ ಅಧ್ಯಕ್ಷ ಪ್ರಭಾಕರ ಮಯ್ಯ, ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವುಡ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಕೋಟ ಸಿಟಿಯ ಕಾರ್ಯದರ್ಶಿ ಶ್ರೀಕಾಂತ್ ವಡೇರ ಹೋಬಳಿ ಸ್ವಾಗತಿಸಿ, ವಿ-ಶೆ„ನ್ ಕೋಚಿಂಗ್ ಸೆಂಟರ್‌ನ ಹರೀಶ್ ಕುಮಾರ್ ಶೆಟ್ಟಿ ಪ್ರಾಸ್ತಾವನೆಗೆ„ದರು. ಉಪನ್ಯಾಸಕ ಹಳ್ನಾಡು ಪ್ರತಾಪ್‌ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿವೇಕ ಅಮೀನ್,ಗಿರೀಶ್ ಕುಮಾರ್ ಶೆಟ್ಟಿ ಸಹಕರಿಸಿದರು.