ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅವಮಾನ ಮಾಡಿದ್ದನ್ನು ಖಂಡಿಸಿ ವಿವಿಧ ಸಂಘಟನೆಗಳು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸ್ ಬಿಗು ಬಂದೋಬಸ್ತ್ ಮಾಡಲಾಗಿದೆ.
ನಾರಾಯಣಗೌಡ ಬಣ ಹಾಗೂ ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸುತ್ತಿದ್ದು, ಹೀಗಾಗಿ ಹಿರೇಬಾಗೇವಾಡಿ ಟೋಲ್ ನಾಕಾ ಬಳಿ ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಬೆಳಗಾವಿ ನಗರ ಪ್ರವೇಶಿಸುವ ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಕನ್ನಡ ಬಾವುಟಕ್ಕೆ ಚಪ್ಪಲಿಯಿಂದ ಹೊಡೆದು ಸುಟ್ಟು ಹಾಕಿದ ಕಾಂಗ್ರೆಸ್ ಕಾರ್ಯಕರ್ತರು!
ಸಂಘಟನಾಕಾರರು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಿದಂತೆ ತಡೆಯಲಾಗುತ್ತಿದೆ. ಕನ್ನಡಿಗರ ಆಕ್ರೋಶ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸುಮಾರು 3000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.