Advertisement

ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಆದ್ಯತೆ: ಗಡ್ಕರಿ

08:09 PM Jun 09, 2022 | Team Udayavani |

ಮೈಸೂರು: ತೈಲ ಬೆಲೆ ದುಬಾರಿ ಆಗುತ್ತಿರುವ ಹಿನ್ನೆಲೆ ಪರ್ಯಾಯವಾಗಿ ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದರು.

Advertisement

ನಗರದಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪೆಟ್ರೋಲ್‌ ಡೀಸೆಲ್‌ಗೆ ಪರ್ಯಾಯವಾಗಿ ಎಥೆನಾಲ್‌ ಸೇರಿ ಜೈವಿಕ ಮೂಲಗಳಿಂದ ತಯಾರಾಗುವ ಇಂಧನ ಬಳಕೆಗೆ ಹೆಚ್ಚು ಒತ್ತು ನೀಡಲಾಗುವುದು. ಇದರಿಂದ ಪರಿಸರ ಮಾಲಿನ್ಯ ತಡೆಗಟ್ಟಲು ಸಾಧ್ಯವಾಗಲಿದೆ. ಅಲ್ಲದೇ ಸ್ವದೇಶಿ ಉತ್ಪನ್ನಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗಲಿದೆ ಎಂದು ಸ್ವಾಮೀಜಿಯವರೊಂದಿಗಿನ ಮಾತುಕತೆ ವೇಳೆ ಗಡ್ಕರಿ ತಿಳಿಸಿದರು.

ಮೈಸೂರು ಸುಂದರ ನಗರ, ಇಲ್ಲಿನ ಪರಿಸರ ಅತ್ಯುತ್ತಮವಾಗಿದೆ. ಈ ಪರಿಸರವನ್ನು ಹೀಗೆಯೇ ಕಾಪಾಡಿಕೊಂಡು ಹೋಗಬೇಕಿದೆ ಎಂದರು. ಇದಕ್ಕೂ ಮುನ್ನ ಗಡ್ಕರಿಗೆ ಮಠದ ವತಿಯಿಂದ ಪೂರ್ಣಕುಂಭ ಸ್ವಾಗತ ದೊರೆಯಿತು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದುಕೊಂಡರು. ಬಳಿಕ ಶ್ರೀಗಳೊಂದಿಗೆ ಉಭಯಕುಶಲೋಪರಿ ಮಾತುಕತೆ ನಡೆಸಿದರು.

ಸಂಸದ ಪ್ರತಾಪ್‌ ಸಿಂಹ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪು.ಸಿದ್ದಲಿಂಗಸ್ವಾಮಿ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್‌.ಆರ್‌.ಮಹದೇವಸ್ವಾಮಿ ಸೇರಿ ಹಲವು ಬಿಜೆಪಿ ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next