ಬೆಂಗಳೂರು: ಬಜೆಟ್‌ನಲ್ಲಿ ಈ ಬಾರಿ ಕನ್ನಡ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಮಕ್ಕಳಲ್ಲಿ ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಜಿಲ್ಲಾಮಟ್ಟದಲ್ಲಿ ಮಕ್ಕಳ ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಮ್ಮೇಳನ ನಡೆಯಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಏಕೀಕರಣ ಹೋರಾಟಗಾರ ಡಾ. ಜಯದೇವಿ ತಾಯಿ ಲಿಗಾಡೆ ಹಾಗೂ ನಾಡೋಜ ಡಾ. ಕಯ್ಯಾರ ಕಿಂಇಣ್ಣ ರೈ ಹೆಸರಿನಲ್ಲಿ ನೀಡುವ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಕನ್ನಡ ಅಭಿವೃದ್ಧಿಗೆ ಅಗತ್ಯತೆಗಳನ್ನು ನಮ್ಮ ಸರ್ಕಾರದಿಂದ ಪೂರ್ಣಗೊಳಿಸಲು ಶೇ.100ರಷ್ಟು ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ:ರಾಜ್ಯದಲ್ಲಿಂದು 5,019 ಮಂದಿಗೆ ಕೋವಿಡ್ ಸೋಂಕು ದೃಢ; 39 ಸಾವು
ಇದೇ ಸಂದರ್ಭದಲ್ಲಿ ಗಡಿನಾಡ ಚೇತನ ಪ್ರಶಸ್ತಿಯನ್ನು ಡಾ.ಜಯದೇವಿ ತಾಯಿ ಲಿಗಾಡೆ ಹೆಸರಿನ ಪ್ರಶಸ್ತಿಯನ್ನು ಧಾರವಾಡದ ಐತಿಹಾಸಿಕ ಸಂಸ್ಥೆ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಮತ್ತು ನಾಡೋಜ ಡಾ.ಕಯ್ಯಾರ ಕಿಂಞ್ಞಣ್ಣ ರೈ ಹೆಸರಿನ ಪ್ರಶಸ್ತಿಯನ್ನು ಗಡಿನಾಡ ಸಂತ ಬಿ.ಪುರುಷೋತ್ತಮ ಮಾಸ್ತರ್ ಅವರಿಗೆ ಪ್ರದಾನ ಮಾಡಲಾಯಿತು.
ಕರ್ನಾಟಕ ವಿದ್ಯಾವರ್ಧಕ ಸಂಘದ ಪರವಾಗಿ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಪ್ರಶಸ್ತಿ ಸ್ವೀಕರಿಸಿದರು. ಪ್ರಾಧಿಕಾರದ ಅಧ್ಯಕ್ಷ ಡಾ. ಸಿ ಸೋಮಶೇಖರ್, ಕನ್ನಡ ಮತ್ತು ಸಂಸðತಿ ಇಲಾಖೆ ಕಾರ್ಯದರ್ಶಿ ಡಾ. ಎನ್.ಮಂಜುಳಾ, ನಾಡೋಜ ಪ್ರೊ. ಹಂಪ ನಾಗರಾಜಯ್ಯ, ಪತ್ರಕರ್ತ ರವೀಂದ್ರ ಭಟ್ ಉಪಸ್ಥಿತರಿದ್ದರು.