Advertisement
ಜಿಲ್ಲೆಯ 30 ಸರ್ಕಾರಿ ಶಾಲೆಗಳು ಮತ್ತು 30 ಅಂಗನವಾಡಿ ಕೇಂದ್ರಗಳನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಮಾದರಿಯಾಗಿ ಪರಿವರ್ತಿಸಿ ಇದೇ ಆ.15 ಸ್ವಾತಂತ್ರ್ಯ ದಿನದಂದು ಮಾದರಿಯಾಗಿ ಪರಿವರ್ತನೆಯಾಗುವ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಮೂಲಕ ಲೋಕಾರ್ಪಣೆ ಮಾಡಲು ಶತಾಯಗತಾಯ ಪ್ರಯತ್ನದಲ್ಲಿ ತೊಡಗಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರತಾಲೂಕಿನ ಮುದ್ದೇನಹಳ್ಳಿಯ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿ ಜಿಪಂ ಸಿಇಒ ಫೌಝೀಯಾ ತರುನ್ನುಮ್, ಜಿಲ್ಲೆಯಲ್ಲಿ 30 ಸರ್ಕಾರಿ ಶಾಲೆ , 30 ಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿ ಪರಿವರ್ತಿಸಲು ಈಗಾಗಲೇ ಕೆಲಸ ಆರಂಭಿಸಿದ್ದೇವೆ. ಸ್ವಾತಂತ್ರ್ಯ ದಿನಾಚರಣೆ ಮೊದಲು ಎಷ್ಟು ಕಾಮಗಾರಿ ಪೂರ್ಣಗೊಳುತ್ತದೆಯೋ ಅದನ್ನು ಉಸ್ತುವಾರಿ ಸಚಿವರಿಂದ ಉದ್ಘಾಟನೆ ಮಾಡಿಸುತ್ತೇವೆ. ಜಿಲ್ಲೆಯ ಮುದ್ದೇನ ಹಳ್ಳಿಯಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಅವರು ವ್ಯಾಸಂಗ ಮಾಡಿದಸರ್ಕಾರಿ ಪ್ರೌಢ ಶಾಲೆಯನ್ನು ಸಕಲ ಸೌಲಭ್ಯದೊಂದಿಗೆ ಮಾದರಿಯಾಗಿ ಪರಿವರ್ತಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.
Advertisement
ಸರ್ಕಾರಿ ಶಾಲೆ-ಅಂಗನವಾಡಿಗೆ ಹೈಟೆಕ್ ಸ್ಪರ್ಶ
09:41 AM Aug 10, 2020 | Suhan S |
Advertisement
Udayavani is now on Telegram. Click here to join our channel and stay updated with the latest news.