Advertisement
ಆಗ “ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆ್ಯಂಬುಲೆನ್ಸ್ ನಿರ್ವಹಣಾ ವ್ಯವಸ್ಥೆ’ ಜಾರಿಗೆ ಹೊಸದಾಗಿ ಟೆಂಡರ್ ಕರೆಯಲು ಅನುಮೋದನೆ ನೀಡುವುದಕ್ಕೆ ರಾಜ್ಯ ಸಚಿವ ಸಂಪುಟ ವಿಳಂಬ ಮಾಡಿರುವುದಕ್ಕೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ಸರ್ಕಾರದ ಕಾರ್ಯವೈಖರಿ ಬೇಸರ ತರುಸುತ್ತಿದೆ. ಸರ್ಕಾರದ ವ್ಯವಹಾರಗಳು ಹೇಗೆ ನಡೆಯುತ್ತಿವೆ ಎಂಬುದೇ ಗೊತ್ತಾಗುತ್ತಿಲ್ಲ.
Related Articles
Advertisement
ಎರಡು ವಾರ ಕಾಲಾವಕಾಶ ನೀಡಿದರೆ ಸಚಿವ ಸಂಪುಟದ ಅನುಮೋದನೆ ಪಡೆದು ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. ಅದಕ್ಕೆ ಆಕ್ಷೇಪಿಸಿದ ನ್ಯಾಯಪೀಠ, ಸಚಿವ ಸಂಪುಟದ ಅನುಮತಿ ಪಡೆಯಲು ಹೈಕೋರ್ಟ್ 2021ರ ಆ.31ರಂದು ಕಾಲಾವಕಾಶ ನೀಡಿತ್ತು. ಎರಡು ತಿಂಗಳೂ ಕಳೆದರೂ ಏನೂ ಆಗಿಲ್ಲ. ಈಗ ಮತ್ತೇ ಸರ್ಕಾರ ಕಾಲಾವಕಾಶ ಕೇಳುತ್ತಿದೆ. ಸರ್ಕಾರದ ಈ ಧೋರಣೆ ಒಪ್ಪುವಂತಹದ್ದಲ್ಲ ಎಂದು ಹೇಳಿತು. ಕೊನೆಗೆ ಎರಡು ವಾರ ಕಾಲಾವಕಾಶ ನೀಡಿದ ನ್ಯಾಯಪೀಠ, ಈ ವಿಚಾರವನ್ನು ತ್ವರಿತವಾಗಿ ಪರಿಗಣಿಸಿ ಎಂದು ಸರ್ಕಾರಕ್ಕೆ ತಾಕೀತು ಮಾಡಿ ವಿಚಾರಣೆ ಮುಂದೂಡಿತು.
ಅಧಿಕಾರಿಗಳ ಖುದ್ದು ಹಾಜರಾತಿ: ಸರ್ಕಾರ ಸುತ್ತೋಲೆ
ಬೆಂಗಳೂರು: ಹೈಕೋರ್ಟ್‌ನಲ್ಲಿನ ಪ್ರಕರಣಗಳಿಗೆ ಸಂಬಂಧಿಸಿ ದಂತೆ ಅಧಿಕಾರಿಗಳ ಉಪಸ್ಥಿತಿ ಮತ್ತು ಖುದ್ದು ಹಾಜರಾತಿಗೆ ನ್ಯಾಯಾಲಯ ನೀಡುವ ನಿರ್ದೇಶನಗಳನ್ನು ಅಧಿಕಾರಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ಡಿಮ್ಹಾನ್ಸ್)ಗೆ ಮೂಲಸೌಕರ್ಯಗಳನ್ನು ಒದಗಿಸುವ ಹಾಗೂ ನಿರ್ವಸಿತರಿಗೆ ವಸತಿ ಕಲ್ಪಿಸುವ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಗೈರು ಹಾಜರಾಗಿ ದ್ದನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್, ಈ ವಿಚಾರವಾಗಿ ಸುತ್ತೋಲೆ ಹೊರಡಿಸುವಂತೆ ಸೋಮವಾರ ತಾಕೀತು ಮಾಡಿತ್ತು.
ಅದರಂತೆ, ಬುಧವಾರ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯ ಪೀಠದ ಮುಂದೆ ಹಾಜರಾದ ಹೆಚ್ಚುವರಿ ಅಡ್ವೋ ಕೇಟ್ ಜನರಲ್ ಧ್ಯಾನ್ ಚಿನ್ನಪ್ಪ,, ಹೈಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿ ದಾಗ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ನಡವಳಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಎಲ್ಲಾ ಇಲಾಖಾ ಮುಖಸ್ಥರಿಗೆ ನಿರ್ದೇಶನ ನೀಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ನ.9ರಂದು ಸುತ್ತೋಲೆ ಹೊರಡಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಕೋರ್ಟ್ ವಿಚಾರದಲ್ಲಿ ಅಧಿ ಕಾರಿ ಗಳು ಗಂಭೀರವಾಗಿ ನಡೆದುಕೊಳ್ಳುವಂತೆ ನೋಡಿ ಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಯಾವುದೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಅಧಿಕಾರಿಗಳ ಉಪಸ್ಥಿತಿ ಬಯಸಿದಾಗ ಅಂತಹ ಅಧಿಕಾರಿಗಳು ತಪ್ಪದೇ ಖುದ್ದಾಗಿ ಮತ್ತು ಆದ್ಯತೆ ಮೇರೆಗೆ ಹಾಜರಾಗಬೇಕು. ಒಂದೊಮ್ಮೆ ಅನಾರೋಗ್ಯವೂ ಸೇರಿದಂತೆ ತುರ್ತು ಕಾರಣಗಳಿದ್ದು, ವಿಚಾರಣೆಗೆ ಹಾಜರಾಗುವುದು ಸಾಧ್ಯವಾಗದಿದ್ದರೆ ಈ ವಿಚಾರವನ್ನು ಮುಂಚಿತವಾಗಿ ಸರ್ಕಾರಿ ವಕೀಲರಿಗೆ ತಿಳಿಸಬೇಕು. ಅಧಿಕಾರಿಗಳು ಈ ನಿರ್ದೇಶವನ್ನು ಪಾಲಿಸದಿದ್ದರೆ ಅಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.