ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು ಹಾಗೂ ಬೋಧಕ- ಬೋಧಕೇತರ ಸಿಬಂದಿಗೆ ಕೋವಿಡ್ ಲಸಿಕೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸ್ವತಃ ವೈದ್ಯರು ಅರ್ಜಿ ಸಲ್ಲಿಸಿರುವುದಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ.
ಈ ಕುರಿತು ಮಂಗಳೂರಿನ ವೈದ್ಯ ಡಾ| ಶ್ರೀನಿವಾಸ ಬಿ.ಕಕ್ಕಿಲಾಯ, ಕರ್ನಾಟಕ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಡಾ| ಬಿ.ಎನ್. ಹರಿಕೃಷ್ಣ, ಡಾ| ಗೌತಮ್ ಶೆಟ್ಟಿ, ಡಾ| ಹರಿಹರ ಪ್ರಸಾದ್ ರಾವ್ ಮತ್ತು ಆದಿ ಚುಂಚನಗಿರಿ ಆಯುರ್ವೇದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಸುಷ್ಮಾ ಆರ್. ಆರಾಧ್ಯ ಹೈಕೋರ್ಟ್‌ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಗುರುವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ವೈದ್ಯರೇ ಈ ರೀತಿಯ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದು ನಿಜಕ್ಕೂ ಅಚ್ಚರಿ ಮೂಡಿಸಿದೆ. ಪೋಲಿಯೋ ಲಸಿಕೆಯನ್ನೂ ವಿರೋಧಿಸಲಾಗಿತ್ತು. ವಿರೋಧಿಸಿದ ದೇಶಗಳಲ್ಲಿ ಪೋಲಿಯೋ ಈಗಲೂ ಇದೆ ಎಂದು ಹೇಳಿತು.
ಸರಕಾರದ ಆದೇಶವು ಸಂವಿಧಾನದ ಪರಿಚ್ಛೇದ 14 ಮತ್ತು 21ರಲ್ಲಿ ಕಲ್ಪಿಸಿರುವ ಸಮಾನತೆ ಮತ್ತು ಜೀವಿಸುವ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದರು. ಅದನ್ನು ಆಕ್ಷೇಪಿಸಿದ ನ್ಯಾಯಪೀಠ, ಈ ವಿಚಾರದಲ್ಲಿ ಸಂವಿಧಾನದ ಪರಿಚ್ಛೇದ 21ರ ಬಗ್ಗೆ ಮಾತನಾಡ ಬೇಡಿ ಎಂದು ಹೇಳಿ ಅರ್ಜಿಯನ್ನು ಕೋವಿಡ್‌ಗೆ ಸಂಬಂಧಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಪೀಠಕ್ಕೆ ವರ್ಗಾಯಿಸಿತು.
ನಾನು ಮುಖ್ಯಮಂತ್ರಿ ಆಗಿದ್ದಾಗ ಐದು ವರ್ಷಗಳಲ್ಲಿ 15 ಲಕ್ಷ ಮನೆಗಳನ್ನು ನಿರ್ಮಿಸಿತ್ತು. ಬಿಜೆಪಿ ಸರಕಾರ ಇದುವರೆಗೂ ಒಂದೇ ಒಂದು ಮನೆ ಕಟ್ಟಿಸಿದ್ದರೆ ತೋರಿಸಲಿ ಎಂದು ಸವಾಲು ಹಾಕಿದರು.