Advertisement

ಶಶಿಕಲಾಗೆ ಆತಿಥ್ಯ ಆರೋಪ: ವರದಿಗೆ ತಿಂಗಳ ಗಡು

12:11 AM Sep 08, 2021 | Team Udayavani |

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ  ಜಯಲಲಿತಾ ಆಪ್ತೆ ವಿ.ಕೆ. ಶಶಿಕಲಾಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ನೀಡಲು ಜೈಲು ಅಧಿಕಾರಿಗಳು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು 30 ದಿನಗಳಲ್ಲಿ ಸಲ್ಲಿಸಬೇಕು ಎಂದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕ್ಕೆ  ಹೈಕೋರ್ಟ್‌ ನಿರ್ದೇಶನ ನೀಡಿದೆ.

Advertisement

ಒಂದು ವೇಳೆ 30 ದಿನಗಳಲ್ಲಿ ವರದಿ ಸಲ್ಲಿಸಲು ತಪ್ಪಿದರೆ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದೂ ಹೈಕೋರ್ಟ್‌ ತಾಕೀತು ಮಾಡಿದೆ.

ಪ್ರಕರಣದ ತನಿಖೆಯನ್ನು ವಿಳಂಬ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿ ತಮಿಳುನಾಡಿನ ಶಿಕ್ಷಣ ತಜ್ಞೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಕೆ.ಎಸ್‌. ಗೀತಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿ ವಿಚಾರಣೆಯನ್ನು ಅ.6ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next