Advertisement
ಈ ಕುರಿತು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್. ಹಿರೇಮಠ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ಎ.ಎಸ್. ಓಕ್ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಷಿಗಳಾದ ಎಂ.ಪಿ. ರೇಣುಕಾಚಾರ್ಯ, ಶಂಕರ್ ಗೌಡ ಐ. ಪಾಟೀಲ್, ಮಾಧ್ಯಮ ಸಂಚಾಲಕ ಜಿ.ಎಸ್. ಸುನೀಲ್, ಮಾಧ್ಯಮ ಸಲಹೆಗಾರ (ಐಟಿ, ಇ-ಆಡಳಿತ) ಬೇಳೂರು ಸುದರ್ಶನ್, ಆರ್ಥಿಕ ಸಲಹೆಗಾರರ ಲಕ್ಷ್ಮೀನಾರಾಯಣ, ಕಾನೂನು ಸಲಹೆಗಾರ ಮೋಹನ್ ಲಿಂಬಿಕಾಯಿ, ಮಾಜಿ ರಾಜಕೀಯ ಕಾರ್ಯದರ್ಶಿ ಎಂ.ಬಿ. ಮರಮಕಲ್ ಮತ್ತು ಮಾಜಿ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್‌ಗೆ ನೋಟಿಸ್ ಜಾರಿ ಮಾಡಿದೆ.