Advertisement

ಸ್ಮಶಾನ ಜಾಗ: ಗ್ರಾಮವಾರು ವರದಿ ನೀಡಲು ಸೂಚನೆ

08:37 PM Jun 30, 2022 | Team Udayavani |

ಬೆಂಗಳೂರು: ಶವ ಸಂಸ್ಕಾರಕ್ಕೆ ಸ್ಮಶಾನ ಜಾಗ ಇಲ್ಲದ ಗ್ರಾಮಗಳು ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಿರುವ ಬಗ್ಗೆ ಗ್ರಾಮವಾರು ಮಾಹಿತಿ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Advertisement

ಈ ಕುರಿತು ಬೆಂಗಳೂರು ನಿವಾಸಿ ಮಹಮ್ಮದ್‌ ಇಕ್ಬಾಲ್‌ ಎಂಬುವರು ಸಲ್ಲಿಸಿರುವ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿಯು ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾ.ಕೆ.ಎಸ್‌. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆ ಬಂದಿತ್ತು.

ಈ ವೇಳೆ ಸರ್ಕಾರದ ಪರ ವಕೀಲರು, ಕೋರ್ಟ್‌ ಆದೇಶ ಪಾಲನೆಯ ದಿಸೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಇದಕ್ಕೆ ಅಸಮಧಾನಗೊಂಡ ನ್ಯಾಯಪೀಠ, ಸರ್ಕಾರಿ ಅಧಿಕಾರಿಗಳಿಗೆ ನ್ಯಾಯಾಲಯದ ಆದೇಶದ ಬಗ್ಗೆ ಗೌರವ ಇಲ್ಲದಂತೆ ಕಾಣುತ್ತದೆ. ಹೀಗಿದ್ದಾಗ ನ್ಯಾಯಾಲಯ ಇರುವುದೇ ಯಾಕೆ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ ನ್ಯಾಯಪೀಠ, ಕೋರ್ಟ್‌ ಆದೇಶ ಪಾಲನೆ ಮಾಡಲು ಮೂರು ವರ್ಷ ಬೇಕೆ? ಅಧಿಕಾರಿಗಳು ಮನಸ್ಸು ಮಾಡಿದರೆ ಒಂದು ವಾರದಲ್ಲಿ ಕ್ರಮ ಕೈಗೊಳ್ಳಬಹುದು ಎಂದು ತರಾಟೆಗೆ ತೆಗೆದುಕೊಂಡಿತು.

ಅಂತಿಮವಾಗಿ ಈವರೆಗೆ ಸ್ಮಶಾನ ಜಾಗ ಇಲ್ಲದ ಎಷ್ಟು ಗ್ರಾಮಗಳಿಗೆ ಜಮೀನು ಒದಗಿಸಲಾಗಿದೆ ಎಂಬ ಬಗ್ಗೆ ಗ್ರಾಮವಾರು ಮಾಹಿತಿಯೊಂದಿಗೆ ಪ್ರಮಾಣಪತ್ರ ಸಲ್ಲಿಸಲು ಸರ್ಕಾರದ ಪರ ವಕೀಲರಿಗೆ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಎರಡು ವಾರ ಕಾಲ ಮುಂದೂಡಿತು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next