Advertisement

ಹೊಸ ವೈರಸ್‌ ಪತ್ತೆ ಹಿನ್ನೆಲೆ: ಸರಕಾರ ಏನೂ ಮಾಡುತ್ತಿಲ್ಲ ಎನ್ನಲಾಗದು

10:49 PM Dec 04, 2021 | Team Udayavani |

ಬೆಂಗಳೂರು: ಹೊಸ ವೈರಸ್‌ ಪತ್ತೆಯಾದ ಹಿನ್ನೆಲೆಯಲ್ಲಿ ಸರಕಾರ ಮತ್ತು ಆಡಳಿತ ಯಂತ್ರ ಎಚ್ಚೆತ್ತುಕೊಂಡಿದ್ದು, ಸರಣಿ ಸಭೆ ನಡೆಸಿ ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಹೀಗಿರುವಾಗ ಸರಕಾರ ಏನೂ ಮಾಡಿಲ್ಲ ಎಂದು ಒಪ್ಪಿಕೊಳ್ಳಲಾಗದು ಎಂದು ಹೈಕೋರ್ಟ್‌ ಹೇಳಿದೆ.

Advertisement

ಕೊರೊನಾ ನಿಯಂತ್ರಣ, ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿ 2020ರ ಮಾರ್ಚ್‌ನಿಂದ ಸಲ್ಲಿಕೆಯಾ ಗಿದ್ದ  ಸುಮಾರು 20 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮು| ನ್ಯಾ| ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.

ಈ ವೇಳೆ, ನ್ಯಾಯಾಲಯದ ನಿರ್ದೇಶವಿದ್ದರೂ, ಕೋವಿಡ್‌ ಮಾರ್ಗಸೂಚಿ ಗಳನ್ನು ಉಲ್ಲಂ ಸುವ ಗಣ್ಯರ ವಿರುದ್ಧ ಸರಕಾರ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಅರ್ಜಿದಾರ

ರೊಬ್ಬರ ಪರ ವಕೀಲರು ನ್ಯಾಯಪೀಠಕ್ಕೆ ದೂರಿದರು.ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸರಕಾರ ಏನೂ ಮಾಡಿಲ್ಲ ಎನ್ನುವ ವಾದವನ್ನು  ನ್ಯಾಯಾಲಯ ಒಪ್ಪುವುದಿಲ್ಲ. ಹೊಸ ವೈರಸ್‌ನ 2 ಪ್ರಕರಣಗಳು ಪತ್ತೆಯಾದ ಬಳಿಕ ಸರಕಾರ ಎಚ್ಚೆತ್ತುಕೊಂಡಿದೆ, ಸಭೆಗಳನ್ನು ಮಾಡಲಾಗುತ್ತಿದ್ದು ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಹೀಗಿರುವಾಗ ಹೈಕೋರ್ಟ್‌ ಮಧ್ಯಪ್ರವೇಶಿಸುವ ಅಗತ್ಯ ಕಂಡು ಬರುತ್ತಿಲ್ಲ.  ಕೈಗೊಂಡಿರುವ ಕ್ರಮಗಳನ್ನು ಇನ್ನಷ್ಟು ಚುರುಕುಗೊಳಿಸಿ ಎಂದು ನಿರ್ದೇಶಿಸಬಹುದಷ್ಟೇ. ಏನಾದರೂ ಸಂದರ್ಭ ಅಥವಾ ಸಮಸ್ಯೆ ಎದುರಾದಲ್ಲಿ ನ್ಯಾಯಾಲಯದ ಬಾಗಿಲು ಸದಾ ತೆರೆದಿರುತ್ತದೆ ಎಂದು ಹೇಳಿತು.

ಲಸಿಕೆ ಕಡ್ಡಾಯ ಬೇಡ: ಅರ್ಜಿ ವಜಾ:

Advertisement

ವೈದ್ಯಕೀಯ ಕಾರಣವಿರುವ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಸಿಬಂದಿಗೆ ಕೋವಿಡ್‌ ಲಸಿಕೆ 1ನೇ ಡೋಸ್‌ ಕಡ್ಡಾಯಗೊಳಿಸದಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂಬ ಅರ್ಜಿಯನ್ನು ಹೈಕೋರ್ಟ್‌ ತಳ್ಳಿ ಹಾಕಿದೆ. ಈ ವಿಚಾರವಾಗಿ ಕೋವಿಡ್‌ 2ನೇ ಅಲೆ ವೇಳೆ 2021ರ ಆಗಸ್ಟ್‌ ನಲ್ಲಿ ಡಾ| ಶ್ರೀನಿವಾಸ ಬಿ. ಕಕ್ಕಿಲಾಯ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಶೀಲಿಸಿದ ಮು| ನ್ಯಾ| ರಿತುರಾಜ್‌ ಅವಸ್ಥಿ  ನೇತೃತ್ವದ ವಿಭಾಗೀಯ ನ್ಯಾಯಪೀಠ, ಲಸಿಕೆ ಹಾಕಿಸಿಕೊಳ್ಳದವರು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸೇರುವ ಶಾಲಾ-ಕಾಲೇಜುಗಳಿಗೆ ಹೋಗಿ ಅಲ್ಲಿರುವವರನ್ನು ಅಪಾಯಕ್ಕೆ ದೂಡುವುದನ್ನು ನ್ಯಾಯಾಲಯ ಬಯಸುವುದಿಲ್ಲ. ಹಾಗಾಗಿ, ಈ ವಿಚಾರದಲ್ಲಿ ಸರಕಾರಕ್ಕೆ ಯಾವುದೇ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದಿತು.

Advertisement

Udayavani is now on Telegram. Click here to join our channel and stay updated with the latest news.

Next