Advertisement
ಉಡುಪಿ ಜಿಲ್ಲೆಯ ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆೆ ನಿಷೇಧ ವಿಧಿಸಿ ಹಸುರು ಪೀಠ (ಗ್ರೀನ್ ಟ್ರಿಬ್ಯೂನಲ್) ನೀಡಿದ್ದ ಆದೇಶದ ಆಧಾರದಲ್ಲಿ ದಕ್ಷಿಣ ಕನ್ನಡದಲ್ಲೂ ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆ ನಿಷೇಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ತಾತ್ಕಾಲಿಕ ಪರವಾನಿಗೆ ಹೊಂದಿದ್ದ 30 ಮಂದಿ ಉಚ್ಚ ನ್ಯಾಯಾಲಯದ ಮೆಟ್ಟಲೇರಿದ್ದರು. ರಾಜ್ಯ ಸರಕಾರ, ಕೇಂದ್ರ ಸರಕಾರ, ಕರ್ನಾಟಕ ರಾಜ್ಯ ಕರಾವಳಿ ನಿಯಂತ್ರಣ ಪ್ರಾಧಿಕಾರ, ಏಳು ಸದಸ್ಯರ ದ.ಕ. ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಗಣಿ ಹಾಗೂ ಭೂವಿಜ್ಞಾನ ಇಲಾಖೆ ಉಪನಿರ್ದೇಶಕರು ಪ್ರತಿವಾದಿಗಳಾಗಿದ್ದರು. ಸೆ. 3ರಂದು ನ್ಯಾಯಾಲಯ ಆದೇಶ ನೀಡಿದೆ.
Related Articles
ಹಸುರು ಪೀಠದ ಆದೇಶದ ಆಧಾರದಲ್ಲಿ ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆ ನಿಷೇಧಕ್ಕೆ ಮೊದಲು ನೀಡಿದ್ದ ಪರವಾನಿಗೆಗಳಲ್ಲಿ ಮಳೆಗಾಲದ ಹಿನ್ನೆಲೆಯಲ್ಲಿ ಜೂ. 1ರಿಂದ ಸೆ. 30ರ ವರೆಗೆ 4 ತಿಂಗಳು ಮರಳುಗಾರಿಕೆ ನಡೆಸಲು ನಿಷೇಧ ವಿಧಿಸಲಾಗಿದೆ. ಹಿನ್ನೆಲೆಯಲ್ಲಿ ಮರಳುಗಾರಿಕೆ ಅವಕಾಶದ ಬಗ್ಗೆ ಸೆ. 30ರ ಬಳಿಕವಷ್ಟೇ ಸ್ಪಷ್ಟ ಚಿತ್ರಣ ದೊರೆಯಲಿದೆ.
Advertisement
ಸುಪ್ರೀಂ ಕೋರ್ಟ್‌ಗೆ ಅರ್ಜಿಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆಗೆ ಹಸಿರು ಪೀಠದಿಂದ ನಿರ್ಬಂಧ ಹಿನ್ನೆಲೆಯಲ್ಲಿ ಈ ವಲಯದಲ್ಲಿ ಮರಳು ತೆಗೆಯುವಿಕೆ ಸ್ಥಗಿತಗೊಂಡಿದೆ. ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆಗೆ ನಿಷೇಧ ವಿಧಿಸಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಾಂಪ್ರದಾಯಿಕ ಮರಳು ಗುತ್ತಿಗೆದಾರರು ಅರ್ಜಿಸಲ್ಲಿಸಿದ್ದಾರೆ. ಆದೇಶದಲ್ಲೇನಿದೆ ?
ಉಡುಪಿ ಜಿಲ್ಲೆಯಲ್ಲಿ ಸಿಆರ್‌ಝಡ್ ವ್ಯಾಪ್ತಿಯಲ್ಲಿ ಬರುವ ನದಿತೀರಗಳಲ್ಲಿ ಅಕ್ರಮ ಮರಳುಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹಸುರುಪೀಠ ಆದೇಶ ಹೊರಡಿಸಿತ್ತು. ಈ ಆದೇಶವನ್ನು ದ.ಕ.ದಲ್ಲಿ ತಾತ್ಕಾಲಿಕ ಪರವಾನಿಗೆ ಹೊಂದಿರುವವರಿಗೆ ಅವರ ಅಹವಾಲುಗಳನ್ನು ಆಲಿಸದೆ ಅನ್ವಯಿಸುವಂತಿಲ್ಲ. ಹಸುರುಪೀಠದ ಆದೇಶವು ಮಾನವಶ್ರಮದ ಮೂಲಕ ಮರಳು ತೆಗೆಯುವುದಕ್ಕೆ ಸಂಪೂರ್ಣ ನಿಷೇಧ ಹೇರಿದೆ ಎಂದು ಅರ್ಥವಲ್ಲ. ತಾತ್ಕಾಲಿಕ ಪರವಾನಿಗೆದಾರರಿಗೆ 2022ರ ಮೇ 21ರಂದು ಹೊರಡಿಸಿದ್ದ ಆದೇಶ ಹಾಗೂ ಮೇ 23ರಂದು ನೀಡಿರುವ ನೋಟಿಸು ಹಸುರುಪೀಠದ ಆದೇಶವನ್ನು ತಪ್ಪಾಗಿ ವ್ಯಾಖ್ಯಾನಿಸಿ ನೀಡಿದ್ದಾಗಿದ್ದು ಅದು ಕಾನೂನಿನ ದೃಷ್ಟಿಯಲ್ಲಿ ನಿಲ್ಲುವುದಿಲ್ಲ. ಆದುದರಿಂದ ರದ್ದುಪಡಿಸಲಾಗಿದೆ. ಪ್ರತಿವಾದಿಗಳು (ಸರಕಾರ) ಯಂತ್ರ ಬಳಸಿ ಅಕ್ರಮ ಮರಳುಗಾರಿಕೆ ನಡೆಯದಂತೆ ಕ್ರಮ ಕೈಗೊಳ್ಳಲು ಸ್ವಾತಂತ್ರ್ಯ ಹೊಂದಿದ್ದಾರೆ. ಅರ್ಜಿದಾರರಿಗೆ ತಾತ್ಕಾಲಿಕ ಪರವಾನಿಗೆಯಲ್ಲಿ ವಿಧಿಸಿದ ಷರತ್ತುಗಳಂತೆ ಮಾನವಶ್ರಮದ ಮರಳುಗಾರಿಕೆಗೆ ಅನುಮತಿ ನೀಡಬಹುದಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ. ಪರಿಶೀಲಿಸಿ ನಿರ್ಧಾರ
ನ್ಯಾಯಾಲಯದ ಆದೇಶ ಜಿಲ್ಲಾಡಳಿತಕ್ಕೆ ಅಧಿಕೃತವಾಗಿ ಬಂದ ಬಳಿಕ ಅದನ್ನು ಪರಿಶೀಲಿಸಿಕೊಂಡು ರಾಜ್ಯ ಸರಕಾರದ ನಿರ್ದೇಶನದಂತೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು.
– ಡಾ| ಕೆ.ವಿ.ರಾಜೇಂದ್ರ, ಜಿಲ್ಲಾಧಿಕಾರಿ