Advertisement
ಆದರೆ ಈ ಅನುಮತಿಯು, ಅರ್ಜಿ ಕುರಿತು ನ್ಯಾಯಾಲಯ ಹೊರಡಿಸುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದೂ ಹೈಕೋರ್ಟ್ ಹೇಳಿದೆ. ಇದರಿಂದ ಕಾಯ್ದೆಯ ಜಾರಿಗೆ ಎದುರಾಗಿದ್ದ ತಾಂತ್ರಿಕ ಅಡಚಣೆ ದೂರವಾದಂತಾಗಿದೆ.
Related Articles
Advertisement
ಸರಕಾರದ ಮನವಿ ಮತ್ತು ಅರ್ಜಿದಾರ ಆಕ್ಷೇಪವನ್ನು ದಾಖಲಿಸಿಕೊಂಡ ನ್ಯಾಯಪೀಠ, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯ್ದೆ-2020 ಅನ್ನು ಸರಕಾರ 2021ರ ಫೆ.15ರಂದು ಜಾರಿ ಮಾಡಿದೆ. 2021ರ ಮೇ 24ರಂದು ಅಧಿಸೂಚನೆ ಹೊರಡಿಸಲಾಗಿದೆ. 2021ರ ಮೇ 25ರಂದು ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಈಗ ಕಾಯ್ದೆ ಸೆಕ್ಷನ್ 5 ಮತ್ತದರ ಅಡಿ ನಿಯಮ ರೂಪಿಸಲಾಗಿದ್ದು, ಜಾರಿಗೊಳಿಸಲು ನ್ಯಾಯಾಲಯದ ಅನುಮತಿ ಕೋರಿದೆ. ಆದ್ದರಿಂದ 2021ರ ಜ.20ರಂದು ನ್ಯಾಯಾಲಯ ಹೊರಡಿಸಿರುವ ಆದೇಶವನ್ನು ಮಾರ್ಪಾಡು ಮಾಡಲಾಗುತ್ತಿದ್ದು, ಸೆಕ್ಷನ್ 5ರ ಜಾರಿಗೆ ಅನುಮತಿ ನೀಡಲಾಗುತ್ತಿದೆ. ಆದರೆ ಇದು ಅರ್ಜಿ ಕುರಿತು ನ್ಯಾಯಾಲಯ ಹೊರಡಿಸುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ’ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ.
ಇದನ್ನೂ ಓದಿ : ಛತ್ತೀಸ್‌ಗಢ: ನಕ್ಸಲರ ದಾಳಿಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯ
ಹಿನ್ನೆಲೆ:ಕಾಯ್ದೆಯ ಸೆಕ್ಷನ್ 5ರ ಪ್ರಕಾರ ಜಾನುವಾರುಗಳನ್ನು ಸಾಗಿಸುವುದು ಕೂಡ ಅಪರಾಧವಾಗಿದೆ. ಇದರಿಂದ ತಮ್ಮದೇ ಜಾನುವಾರುಗಳನ್ನು ಸಾಗಿಸಲು ರೈತರಿಗೆ ಕಷ್ಟವಾಗಲಿದೆ ಎಂದು ಆಕ್ಷೇಪಿಸಿದ್ದ ಅರ್ಜಿದಾರರು, ಸುಗ್ರೀವಾಜ್ಞೆಗೆ ತಡೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದರು. ಆ ಮನವಿ ಪುರಸ್ಕರಿಸಿದ್ದ ಹೈಕೋರ್ಟ್, ಕಾಯ್ದೆಗೆ ನಿಯಮಗಳನ್ನು ಅಂತಿಮಗೊಳಿಸಿ ಜಾರಿಯಾಗುವವರೆಗೆ ರಾಜ್ಯದಲ್ಲಿ ಜಾನುವಾರುಗಳನ್ನು ಸಾಗಣೆ ಮಾಡುವವರ ವಿರುದ್ಧ ಸೆಕ್ಷನ್ 5ರ ಪ್ರಕಾರ ಯಾವುದೇ ಕಠಿಣ ಕ್ರಮ ಜರುಗಿಸಬಾರದು ಎಂದು ಸರ್ಕಾರಕ್ಕೆ ನಿರ್ದೇಶಿಸಿ 2021ರ ಜ.20ರಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿತ್ತು.