Advertisement

ರಾಜಕೀಯ ವ್ಯಕ್ತಿಗಳ ಅರ್ಜಿಗಳಿಗೆ ತೀವ್ರ ಅಸಮಾಧಾನ

11:14 PM May 20, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಆಕ್ಸಿಜನ್‌ ಅಭಾವ ನೀಗಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆಯಿಂದ (ಇಸ್ರೋ) ಆಕ್ಸಿಜನ್‌ ಪಡೆಯಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ಕಾಂಗ್ರೆಸ್‌ ಮುಖಂಡ ಎಚ್‌.ಕೆ. ಪಾಟೀಲ್‌ ಅವರನ್ನು ಹೈಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ.

Advertisement

ಅಲ್ಲದೇ ಕೋವಿಡ್‌ ವಿಚಾರದಲ್ಲಿ ವಿಧಾನಪರಿಷತ್‌ ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ್‌, ಕಾಂಗ್ರೆಸ್‌ ಶಾಸಕ ಕೆ. ಆರ್‌. ರಮೇಶ್‌ ಕುಮಾರ್‌ ಕೂಡ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿರುವುದನ್ನು ಗಮನಿಸಿದ ಹೈಕೋರ್ಟ್‌, ರಾಜಕೀಯ ವ್ಯಕ್ತಿಗಳು ಅರ್ಜಿ ಸಲ್ಲಿಸುತ್ತಿರುವುದು ಅಚ್ಚರಿ ತಂದಿದೆ. ಕಳೆದ ಒಂದು ವರ್ಷದಿಂದ ಕೋವಿಡ್‌ ವಿಚಾರದ ಬಗ್ಗೆ ನ್ಯಾಯಾಲಯ ವಿಚಾರಣೆ ನಡೆಸಿದೆ. ವಿವಿಧ ಸಂದರ್ಭಗಳಲ್ಲಿ ಅನೇಕ ವಿಷಯಗಳ ಬಗ್ಗೆ 800ಕ್ಕೂ ಹೆಚ್ಚು ಪುಟಗಳ ನಿರ್ದೇಶನಗಳನ್ನು ನೀಡಲಾಗಿದೆ. ಈವರೆಗೆ ಯಾರೊಬ್ಬ ರಾಜಕೀಯ ವ್ಯಕ್ತಿ ಜನರ ಸಮಸ್ಯೆಗಳನ್ನು ಇಟ್ಟುಕೊಂಡು ನ್ಯಾಯಾಲಯಕ್ಕೆ ಬಂದಿಲ್ಲ. ಈ ಏಕಾಏಕಿ ಸಾಲು-ಸಾಲು ಅರ್ಜಿಗಳು ಸಲ್ಲಿಕೆಯಾಗುತ್ತಿವೆ ಎಂದು ಹೇಳಿತು.

ಕೋವಿಡ್‌ ನಿರ್ವಹಣೆ ವಿಚಾರವಾಗಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾ| ಎ.ಎಸ್‌. ಓಕ್‌ ಹಾಗೂ ನ್ಯಾ| ಅರವಿಂದ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ಈ ಅರ್ಜಿಗಳು ವಿಚಾರಣೆಗೆ ಬಂದಿದ್ದವು. ನ್ಯಾಯಪೀಠ ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಕಾರಣ ಮಧ್ಯಾಹ್ನ 1.30ಕ್ಕೆ ಪಾಟೀಲ್‌ ಪರ ವಕೀಲರು, ಅರ್ಜಿಯನ್ನು ಹಿಂಪಡೆಯು ವುದಾಗಿ ತಿಳಿಸಿದರು. ಬಳಿಕ ಅರ್ಜಿಯನ್ನು ವಜಾಗೊಳಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next